ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾ ಸಭೆ
ಗದಗ: ಜಿಲ್ಲಾ ಬಿಜೆಪಿ ಹಿಂದುಳಿದ ವರ್ಗದ ಸಭೆ ಇತ್ತೀಚೆಗೆ ಜರುಗಿತು. ಈ ಸಭೆಯಲ್ಲಿ ಮೊರ್ಚಾದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅರುಣ ಅಣ್ಣಿಗೇರಿ ಮಾತನಾಡಿ, ಮುಂದಿನ ದಿನಗಳಲ್ಲಿ ಕಾರ್ಯ ಚಟುವಟಿಕೆ ರೂಪರೇಷೆ ಹಾಗೂ ಮುಂದಿನ ಸದಸ್ಯತ್ವ ಅಭಿಯಾನದಲ್ಲಿ ಹಿಂದುಳಿದ ವರ್ಗದ ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಸಂಘಟನೆಗೆ ಕರೆತರಲು ಎಲ್ಲ ಕಾರ್ಯಕರ್ತರು ಶ್ರಮಿಸಬೇಕು ಎಂದರು. ರಾಜ್ಯ ಹಿಂದುಳಿದ ವರ್ಗಗಳ ಬಿಜೆಪಿ ಮೋರ್ಚಾ ರಾಜ್ಯ ಉಪಾಧ್ಯಕ್ಷ ಲಕ್ಷ್ಮಣ ಉಪ್ಪಾರ, ಪಕ್ಷದ ಸಂಘಟನೆಯ ಕುರಿತು ಮಾರ್ಗದರ್ಶನ ಮಾಡಿದರು. ಜಿಲ್ಲಾ ಮಾಜಿ ಅಧ್ಯಕ್ಷ ಎಂ.ಎಸ್. ಕರಿಗೌಡ್ರ, ರಂಗಾಪತಿ, ನಿಂಗಪ್ಪ ನೀಲಗುಂದ, ಮುದಿಯಪ್ಪ ಕರಡಿ, ಗೂಳಪ್ಪ ಕರಿಗಾರ, ಉಮೇಶ ಪೂಜಾರ ಇತರರಿದ್ದರು.