ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಹುಲಿಗುಡ್ಡ ಏತ ನೀರಾವರಿಯಿಂದ ಕೆರೆಗಳಿಗೆ ನೀರು

Srinivasa Murthy VN
Updated On : 30 Jun 2014, 11:06 am

ಮುಂಡರಗಿ: ತಾಲೂಕಿನ ಭಾಗದ ರೈತರ ಜೀವನಾಡಿಯಾಗಿರುವ ಶಿಂಗಟಾಲೂರು ಹುಲಿಗುಡ್ಡ ಏತ ನೀರಾವರಿ ಯೋಜನೆಯಿಂದ ತಾಲೂಕಿನ ಎಲ್ಲ ನೀರಾವರಿ ಕೆರೆಗಳಿಗೆ ನೀರು ತುಂಬಿಸಿ ಕೆರೆಗಳ ಪುನಶ್ಚೇತದ ಜೊತೆಗೆ ಅಂತರ್ಜಲವನ್ನು ಹೆಚ್ಚಿಸಲು ಯೋಜಿಸಲಾಗಿದೆ ಎಂದು ಸಂಸದ ಶಿವಕುಮಾರ ಉದಾಸಿಹೇಳಿದರು.
ಅವರು ಶನಿವಾರ ರಾತ್ರಿ ಮುಂಡರಗಿ ಪಟ್ಟಣದ ಜಗದ್ಗುರು ತೋಂಟದಾರ್ಯ ಮಠದಲ್ಲಿ ಜರುಗಿದ ಪ್ರವಚನ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ರೇಲ್ವೆ ಖಾತೆ ಸಚಿವರೊಂದಿಗೆ ಈಗಾಗಲೇ ಮಾತನಾಡಿ, ಮನವಿ ನೀಡಿದ್ದು, ಗದಗ, ಮುಂಡರಗಿ, ಹಡಗಲಿ ಮಾರ್ಗವಾಗಿ ಹರಿಹರಕ್ಕೆ ನೂತನ ರೈಲು ಮಾರ್ಗದ ಕುರಿತು ಹೆಚ್ಚು ಶ್ರಮವಹಿಸುವುದು, ಮುಂಡರಗಿ ತಾಲೂಕಿನ ಅಭಿವೃದ್ಧಿಗಾಗಿ ಹೆಚ್ಚಿನ ಅನುದಾನವನ್ನು ನೀಡಿ ಪ್ರಾಮಾಣಿಕವಾಗಿ  ಅಭಿವೃದ್ಧಿ ಕೆಲಸ ಮಾಡುವೆ ಎಂದರು.  ಬ್ಯಾಂಕ್ ಅಧಿಕಾರಿಗಳೊಂದಿಗೆ ಮಾತನಾಡಿ, ಉನ್ನತ ಶಿಕ್ಷಣಕ್ಕೆ ಸಾಲ ಕೊಡಿಸುವ ಪ್ರಯತ್ನ, ತಾಲೂಕಿನಲ್ಲಿನ ಶುದ್ಧ ಕುಡಿಯುವ ನೀರು ಘಟಕ ಸ್ಥಾಪನೆ, ವಿದ್ಯಾರ್ಥಿಗಳಿಗಾಗಿ ಹಾಗೂ ಯುವ ಮಿತ್ರರಿಗಾಗಿ ಡಿಜಿಟಲ್ ಲೈಬ್ರರಿ ನಿರ್ಮಾಣ ಸೇರಿದಂತೆ ಅನೇಕ ಅಭಿವೃದ್ಧಿ ಕೆಲಸಗಳನ್ನು ಮುಂದಿನ 5 ವರ್ಷದ ಅವಧಿಯಲ್ಲಿ ಈ ತಾಲೂಕಿಗೆ ಮಾಡುವುದಾಗಿ ತಿಳಿಸಿದರು. ಸ್ಥಳೀಯ ತೋಂಟದಾರ್ಯ ಮಠದಲ್ಲಿ ನಿರ್ಮಾಣಗೊಳ್ಳುತ್ತಿರುವ ಕಲ್ಯಾಣ ಕೇಂದ್ರಕ್ಕೆ ಹೆಚ್ಚಿನ ರೀತಿಯ ಸಹಾಯ ಸಹಕಾರ ಮಾಡುವುದಾಗಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement