ಕ್ಷೇತ್ರ ಅಭಿವೃದ್ಧಿಗೆ ಬದ್ಧ: ಉದಾಸಿ
ಲಕ್ಷ್ಮೇಶ್ವರ: ನರೇಂದ್ರ ಮೋದಿ ಸರ್ಕಾರದಲ್ಲಿ ನಾನು ಸಂಸದನಾಗಿರುವುದು ಹೆಮ್ಮೆಯ ಸಂಗತಿಯಾಗಿದ್ದು, ಸಂಸತ್ತಿಗೆ 2ನೇ ಬಾರಿಗೆ ನನ್ನನ್ನು ಆಯ್ಕೆ ಮಾಡಿದ ಮತದಾರರ ಸೇವೆಗೆ ನಾನು ಸದಾ ಸಿದ್ಧನಿದ್ದು, ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಸಕ್ರಿಯವಾಗಿ ಪ್ರಯತ್ನಿಸುತ್ತೇನೆ ಎಂದು ಸಂಸದ ಶಿವಕುಮಾರ ಉದಾಸಿ ಭರವಸೆ ನೀಡಿದರು.
ಸಮೀಪದ ಅಡರಕಟ್ಟಿ ಗ್ರಾಮದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸನ್ಮಾನ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಹಾವೇರಿ ಲೋಕಸಭಾ ಕ್ಷೇತ್ರ ಸಮಗ್ರ ಅಭಿವೃದ್ಧಿಗೆ ಪ್ರಥಮ ಆದ್ಯತೆ ನೀಡಿ ಮಾದರಿ ಕ್ಷೇತ್ರವನ್ನಾಗಿ ಮಾಡುವುದು ನನ್ನ ಗುರಿಯಾಗಿದೆ. ಶಿರಹಟ್ಟಿ ತಾಲೂಕಿನ ಕೆಲ ಹಳ್ಳಿಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಇದ್ದು, ಇದರ ಪರಿಹಾರಕ್ಕೆ ಯೋಜನೆ ರೂಪಿಸಲಾಗಿದ್ದು, ಅದರಂತೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಅನುಷ್ಠಾನಗೊಳಿಸುವತ್ತ ಈಗಾಗಲೆ ಕಾರ್ಯ ಪ್ರಾರಂಭವಾಗಿದೆ. ಗದಗ-ಯಲವಗಿ ರೇಲ್ವೆ ಮಾರ್ಗಕ್ಕಾಗಿ ಪ್ರಯತ್ನಿಸಲಾಗುವುದು ಎಂದರು.
ಮಾಜಿ ಶಾಸಕ ರಾಮಣ್ಣ ಲಮಾಣಿ, ಚನ್ನಪ್ಪ ಹಳೇಮನಿ, ಗ್ರಾಪಂ ಉಪಾಧ್ಯಕ್ಷ ವಿರೂಪಾಕ್ಷಪ್ಪ ಹೂಗಾರ, ಚಂದ್ರಗೌಡ ಪಾಟೀಲ, ಯಲ್ಲಪ್ಪ ರೊಳ್ಳಿ, ನಾಗರಾಜ ಚಿಂಚಲಿ, ಸಿದ್ದಪ್ಪ ಹವಳದ, ರುದ್ರಪ್ಪ ಕೆಂಚಕ್ಕನವರ, ಎಂ.ಆರ್. ಹವಳದ, ಮಂಜುನಾಥ ಮುಳಗುಂದ, ನಾಗನಗೌಡ ಪಾಟೀಲ, ಧರ್ಮಣ್ಣ ಲಮಾಣಿ, ಶ್ರೀಶೈಲಸ್ವಾಮಿ ಪೂಜಾರ ಮುಂತಾದವರಿದ್ದರು.