ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ರೇಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸಲಿ: ಹಿರೇಮಠ

Srinivasa Murthy VN
Updated On : 1 Jul 2014, 10:46 am

ಗದಗ: ಪ್ರವಾಸೋದ್ಯಮ, ಔದ್ಯೋಗಿಕರಣ, ವ್ಯಾಪಾರ ವಹಿವಾಟುಗಳು ಬೆಳೆಯಲು ಕರ್ನಾಟಕವು ಸರ್ವಾಂಗೀಣ ಅಭಿವೃದ್ಧಿ ಹೊಂದಲು ಕೇಂದ್ರ ಸರ್ಕಾರದಿಂದ ರಾಜ್ಯದಲ್ಲಿ ಅನುಷ್ಠಾನಗೊಳ್ಳಲಿರುವ ರೇಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರ ಸ್ಪಂದಿಸುವುದು ಅವಶ್ಯವಿದೆ ಎಂದು ಶಿವಬಸವ ಜನಕಲ್ಯಾಣ ಸಂಸ್ಥೆ ಅಧ್ಯಕ್ಷ ಬಸವಣ್ಣೆಯ್ಯ ಹಿರೇಮಠ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಯುಪಿಎ ಸರ್ಕಾರವಿದ್ದಾಗ ಕೈರಾಡ್ ಒಪ್ಪಂದಂತೆ ಅಂದು ರಾಜ್ಯದ ಆಡಳಿತ ಚುಕ್ಕಾಣಿ ಹಿಡಿದಿದ್ದ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ, ಕೇಂದ್ರ ಸರ್ಕಾರ ರಾಜ್ಯದಲ್ಲಿ ಕೈಕೊಂಡ ರೇಲ್ವೆ ಯೋಜನೆಗಳಿಗೆ ಯೋಜನೆಯ ಅರ್ಧದಷ್ಟು ಹಣವನ್ನು ಭರಿಸಿ ರೇಲ್ವೆ ಯೋಜನೆಗಳು ಪೂರ್ಣಗೊಳ್ಳಲು ಬದ್ಧತೆ ಹೊಂದಿತ್ತು. ಇದರಿಂದ ಈ ಭಾಗದ ರೇಲ್ವೆ ಯೋಜನೆಗಳು ಪೂರ್ಣಗೊಂಡವು.
ಹಲವು ಯೋಜನೆಗಳು ಭರದಿಂದ ಸಾಗಿವೆ. ಇತ್ತೀಚಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಲಭ್ಯವಾಗಲಿರುವ ರೇಲ್ವೆ ಯೋಜನೆಗಳಿಗೆ 50್ಗ50 ಅನುಪಾತದಲ್ಲಿ ರಾಜ್ಯ ಸರ್ಕಾರದಿಂದ ಅನುದಾನ ಒದಗಿಸಲಾಗುವುದಿಲ್ಲ ಎಂದು ಹೇಳಿರುವುದು ವಿಷಾದನೀಯವಾಗಿದೆ.
ಅಂದು ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರವಿದ್ದರೂ ರಾಜ್ಯದ ಬಿಜೆಪಿ ಸರ್ಕಾರ ಪಕ್ಷಭೇದ ಮರೆತು ತನ್ನ ಪಾಲಿನ ಅನುದಾನ ಒದಗಿಸಿತು. ಇಂದು ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ ಎಂಬ ಕಾರಣಕ್ಕೆ ಸಿದ್ದರಾಮಯ್ಯನವರು ರೇಲ್ವೆ ಯೋಜನೆಗಳಿಗೆ ತನ್ನ ಪಾಲಿನ ಹಣ ನೀಡದೆ ಇರುವುದು ಖಂಡನೀಯ.
ಕೇಂದ್ರದ ಮಾಜಿ ರೇಲ್ವೆ ಸಚಿವ ಮಲ್ಲಿಕಾರ್ಜುನ ಖರ್ಗೆಯವರು ಇಂದಿನ ರೇಲ್ವೆ ಸಚಿವ ಡಿ.ವಿ. ಸದಾನಂದಗೌಡರೊಂದಿಗೆ ರೇಲ್ವೆ ಅಭಿವೃದ್ಧಿಗಾಗಿ ಪಕ್ಷಭೇದ ಮರೆತು ರೇಲ್ವೆ ಯೋಜನೆಗಳಿಗೆ ಅನುದಾನ ಒದಗಿಸಬೇಕೆಂದು ಮುಖ್ಯಮಂತ್ರಿಗಳಿಗೆ ಕಿವಿಮಾತು ಹೇಳಿದ್ದು ಶ್ಲಾಘನೀಯವಾಗಿದೆ.
ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ರೇಲ್ವೆ ಯೋಜನೆಗಳಿಗೆ ರಾಜ್ಯ ಸರ್ಕಾರ ತನ್ನ ಪಾಲಿನ ಅನುದಾನವನ್ನು ಒದಗಿಸಬೇಕೆಂದು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement