ಮಾರನಬಸರಿ: ಮತ್ತೆ 40 ಮಕ್ಕಳು ಆಸ್ಪತ್ರೆಗೆ ದಾಖಲು
ರೋಣ: ಬಿಸಿಯೂಟ ಸೇವಿಸಿ ತಾಲೂಕಿನ ಮಾರನಬಸರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 50ಕ್ಕೂ ಹೆಚ್ಚು ಮಕ್ಕಳು ಸೋಮವಾರ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದರು. ಮಂಗಳವಾರ ಮಕ್ಕಳ ಆರೋಗ್ಯದಲ್ಲಿ ಮತ್ತೆ ಏರುಪೇರಾಗಿದ್ದು, ಮತ್ತೆ 40ಕ್ಕೂ ಹೆಚ್ಚು ಮಕ್ಕಳನ್ನು ಪಟ್ಟಣದ ಡಾ. ಭೀಮಸೇನ್ ಜೋಶಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಯಿತು. ದಾಖಲಾದ ಮಕ್ಕಳಲ್ಲಿ ಕೆಲ ಮಕ್ಕಳಿಗೆ ಮಂಗಳವಾರ ಬೆಳಗ್ಗೆ ಹೊಟ್ಟೆನೋವು, ತಲೆನೋವು ಕಾಣಿಸಿಕೊಂಡಿದ್ದು, ಇದರಿಂದ ವಿಚಲಿತಗೊಂಡ ಪಾಲಕರು ಮತ್ತು ಶಿಕ್ಷಕರು ಮಕ್ಕಳನ್ನು ಆಸ್ಪತ್ರೆಗೆ ದಾಖಲಿಸಿದರು.