9ರಂದು ಗದಗದಲ್ಲಿ ಬೃಹತ್ ಉದ್ಯೋಗ ಮೇಳ: ಹಿರೇಮಠ
ಕನ್ನಡಪ್ರಭ ವಾರ್ತೆ, ಗದಗ, ಮಾ. 6
ನಗರದ ಮನೋರಮಾ ಮಹಾವಿದ್ಯಾಲಯದಲ್ಲಿ ಬೃಹತ್ ಉದ್ಯೋಗ ಮೇಳವನ್ನು ಮಾ. 9ರ ಬೆಳಗ್ಗೆ 11ಕ್ಕೆ ಹಮ್ಮಿಕೊಳ್ಳಲಾಗಿದೆ ಎಂದು ಮನೋರಮಾ ಮಹಾವಿದ್ಯಾಲಯದ ಪ್ರಾಚಾರ್ಯ ಬಿ.ಎಸ್. ಹಿರೇಮಠ ತಿಳಿಸಿದರು.
ಅವರು ಗುರುವಾರ ನಗರದ ಮನೋರಮಾ ಮಹಾವಿದ್ಯಾಲಯದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಜಿಲ್ಲೆಯಲ್ಲಿರುವ ವಿದ್ಯಾರ್ಥಿಗಳು, ಅದರಲ್ಲಿಯು ಮುಖ್ಯವಾಗಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ದೊಡ್ಡ ದೊಡ್ಡ ಕೈಗಾರಿಕೆಗಳಲ್ಲಿ ಕೆಲಸ ಕೈಗೊಂಡು ಆರ್ಥಿಕವಾಗಿ ಅಭಿವೃದ್ಧಿ ಹೊಂದುವ ಕನಸನ್ನು ಕಂಡಿದ್ದಾರೆ. ಅಲ್ಲದೇ ಇಂದು ಗ್ರಾಮೀಣ ಪ್ರದೇಶದಲ್ಲಿನ ವಿದ್ಯಾರ್ಥಿಗಳು ಉದ್ಯೋಗದಿಂದ ವಂಚಿತರಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ನಗರದಲ್ಲಿ ಮಾ. 9ರಂದು ಈ ಬೃಹತ್ ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಈ ಮೇಳದಲ್ಲಿ ದೇಶದ ಪ್ರತಿಷ್ಠಿತ ವಾಣಿಜ್ಯೋದ್ಯಮ ಮತ್ತು ಕೈಗಾರಿಕಾ ಸಂಸ್ಥೆಗಳು ಭಾಗವಹಿಸಲಿದ್ದು, ಅವುಗಳಲ್ಲಿ ಇನ್ಫೋಸಿಸ್, ಸಾಫ್ಟವೇರ್ ಕಾರ್ಟ್, ನವಭಾರತ, ಫ್ಯೂಚರ್ ಫೈನಾನ್ಸಿಯಲ್ ಸರ್ವಿಸಸ್ ಲಿಮಿಟೆಡ್, ಫಸ್ಟ್ ಸೋರ್ಸ್, ವೈಟ್ ಹಾರ್ಸ್, ಮೀಡಿಯಾ ವನ್ ಕಮ್ಯೂನಿಕೇಷನ್ಸ್, ಪೇಸ್ ಕನ್ಸಲ್ಟನ್ಸಿ ಸರ್ವಿಸಸ್, ಏಜೀಸ್ ಮುಂತಾದ ದೇಶದ ಮುಂಚೂಣಿಯಲ್ಲಿರುವ ಕಂಪನಿಗಳು ಭಾಗವಹಿಸಲಿವೆ. ಬಿಬಿಎ, ಬಿಸಿಎ, ಬಿಕಾಂ, ಬಿಎಸ್ಸಿ, ಪದವಿ ಅಂತಿಮ ವರ್ಷದಲ್ಲಿ ಅಭ್ಯಾಸ ಮಾಡುತ್ತಿರುವ ಹಾಗೂ ಪದವಿ ಪೂರ್ಣಗೊಳಿಸಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಈ ಬೃಹತ್ ಉದ್ಯೋಗ ಮೇಳದಲ್ಲಿ ಭಾಗವಹಿಸಿ ಸದುಪಯೋಗ ಪಡೆದುಕೊಳ್ಳುವಂತೆ ಕೋರಿದರು. ಉದ್ಯೋಗಾಕಾಂಕ್ಷಿಗಳು ಹೆಚ್ಚಿನ ಮಾಹಿತಿಗಾಗಿ 9916121622, 9449760930, 9036056121 ಇಲ್ಲಿಗೆ ಸಂಪರ್ಕಿಸಬಹುದಾಗಿದೆ ಎಂದರು. ನರಸಿಂಹ ಕುಡತಕರ, ಮಂಜುನಾಥ ಕುಡತಕರ, ಸಂಜಯ ಕುಡತಕರ, ಚೇತನ ಕುಡತಕರ ಹಾಗೂ ಕಾಲೇಜಿನ ಸಿಬ್ಬಂದಿ ಸುದ್ದಿಗೋಷ್ಠಿಯಲ್ಲಿದ್ದರು.