ಸ್ತ್ರೀಯರು ಪುರುಷರಿಗೆ ಸರಿಸಮಾನ
ಕನ್ನಡಪ್ರಭ ವಾರ್ತೆ, ಗದಗ, ಮಾ. 9
ಮಹಿಳೆಯರು ಯಾರಿಗೂ ಕಡಿಮೆ ಇಲ್ಲ, ಅವಳು ಎಲ್ಲ ರಂಗದಲ್ಲಿ ಅಧಿಪತ್ಯ ಸಾಧಿಸಿದ್ದಾಳೆ. ಮಹಿಳೆಯರು ಪುರುಷರಿಗೆ ಸರಿಸಮಾನವಾಗಿ ಸಾಧನೆ ಮಾಡಿದ್ದಾಳೆ ಎಂದು ಗದಗ ಶಹರ ಪೊಲೀಸ್ ಠಾಣೆಯ ಪಿಎಸ್ಐ ಕೃಷ್ಣವೇಣಿ ಗುರ್ಲಹೊಸರು ಹೇಳಿದರು.
ಅವರು ಯಂಗ್ ಇಂಡಿಯಾ ಕಾರ್ಯಾಲಯದಲ್ಲಿ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಮಹಿಳೆಯರು ಸ್ವಾವಲಂಬಿ ಆಗಬೇಕು. ಈಗ ಮಹಿಳೆ ದೇಶ ನಡೆಸುವ ಸಾಮರ್ಥ್ಯ ಹೊಂದಿದ್ದಾಳೆ ಎಂದು ಈ ಸಂದರ್ಭದಲ್ಲಿ ಮಹಿಳೆಯರಿಗೆ ಕಿರು ಸಾಲದ ಚೆಕ್ ವಿತರಿಸಲಾಯಿತು.
ವೇದಿಕೆಯ ಮೇಲೆ ಶಮಾ ಪಟ್ಟದಕಲ್ಲ, ವಿರಮ್ಮಾ ರಾಮಣ್ಣವರ ಇದ್ದರು. ನಯನಾ ಹೊಳೆಯಣ್ಣವರ ಕಾರ್ಯಕ್ರಮ ನಿರೂಪಿಸಿದರು. ಹೀನಾ ಬನ್ನೂರ ವಂದಿಸಿದರು.