ಪಿಯು ಪರೀಕ್ಷೆ: ಪ್ರತಿಬಂಧಕಾಜ್ಞೆ
ಗದಗ: ಪಪೂ ಶಿಕ್ಷಣ ಇಲಾಖೆಯು 2014ರ ಮಾರ್ಚ್‌ನಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಮಾ. 12ರಿಂದ 27ರ ವರೆಗೆ ಬೆಳಗ್ಗೆ 9ರಿಂದ ಸಂಜೆ 5.15ರ ವರೆಗೆ ಜರುಗಲಿವೆ. ಈ ಪರೀಕ್ಷೆಗಳು ಸುಗಮವಾಗಿ ಜರುಗುವ ಮತ್ತು ಶಿಸ್ತು ಶಾಂತಿ ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪರೀಕ್ಷಾ ಕೇಂದ್ರದ ಸುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಮಾ. 12ರಿಂದ 27ರ ವರೆಗೆ ಬೆಳಗ್ಗೆ 8.30ರಿಂದ ಸಂಜೆ 5.30ರ ವರೆಗೆ ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಲಾಗಿದೆ. ಈ ಅವಧಿಯಲ್ಲಿ ಪರೀಕ್ಷಾರ್ಥಿಗಳು ಹಾಗೂ ಪರೀಕ್ಷೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ಹೊರತುಪಡಿಸಿ ಇತರ ಯಾವುದೇ ವ್ಯಕ್ತಿ ಅಥವಾ ಐದು ಐದಕ್ಕಿಂತ ಹೆಚ್ಚು ಜನರು ಗುಂಪು ಕೂಡುವುದು ಅಥವಾ ವ್ಯಕ್ತಿಗಳ ಗುಂಪುಗಳ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ಈ ಪ್ರದೇಶ ವ್ಯಾಪ್ತಿಯಲ್ಲಿ ಬರುವ ಝರಾಕ್ಸ್ ಅಂಗಡಿ, ಬುಕ್‌ಸ್ಟಾಲ್, ಫೋಟೋ ಕಾಪಿಯರ್‌ಗಳನ್ನು ಬಂದ ಮಾಡಲು ಆದೇಶಿಸಿದೆ. ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಫೋನ್ ಮತ್ತು ಇತರೆ ಸಂಪರ್ಕ ಸಲಕರಣೆಗಳನ್ನು ತರುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗುರುಶಾಂತಪ್ಪ ವಾರದ ನಿಧನ
ಲಕ್ಷ್ಮೇಶ್ವರ: ಪಟ್ಟಣದ ಹಿರಿಯ ನ್ಯಾಯವಾದಿ ಗುರುಶಾಂತಪ್ಪ ಚನಬಸಪ್ಪ ವಾರದ ಭಾನುವಾರ ನಿಧನರಾದರು. ಮೃತರಿಗೆ ಪತ್ನಿ, ಓರ್ವ ಪುತ್ರ, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು, ಬಳಗವಿದೆ.
ಸಂತಾಪ: ಗುರುಶಾಂತಪ್ಪ ವಾರದ ಅವರ ನಿಧನಕ್ಕೆ ಮಾಜಿ ಶಾಸಕರಾದ ಜಿ.ಎಸ್. ಗಡ್ಡದೇವರಮಠ, ಗಂಗಣ್ಣ ಮಹಾಂತಶೆಟ್ಟರ, ರಾಮಣ್ಣ ಲಮಾಣಿ, ಮುಖಂಡ ಆನಂದ ಮೆಕ್ಕಿ, ಡಿ.ಬಿ. ಬಳಿಗಾರ, ಗದಿಗೆಪ್ಪ ಯತ್ನಳ್ಳಿ, ಶಂಕ್ರಪ್ಪ ಮ್ಯಾಗೇರಿ, ಶಿವಣ್ಣ ನೆಲವಗಿ, ಚಂದ್ರಣ್ಣ ಮಹಾಜನಶೆಟ್ರ, ಮಹೇಶ ಹೊಗೆಸೊಪ್ಪಿನ, ಮಹೇಶ ಲಿಂಬಿಕಾಯಿ, ಶಂಕರ ಬಾಳಿಕಾಯಿ ಸಂತಾಪ ವ್ಯಕ್ತಪಡಿಸಿದ್ದಾರೆ.
--