ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಇಂದಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ

Rashmi Kasaragodu
Updated On : 12 Mar 2014, 3:00 am

ಗಜೇಂದ್ರಗಡ: ದ್ವಿತೀಯ ಪಿಯುಸಿ ಪರೀಕ್ಷೆ ಮಾ. 12ರಿಂದ ರಾಜ್ಯಾದ್ಯಂತ ಆರಂಭಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರ ಸ್ಥಳೀಯ ಎಸ್.ಎಂ  ಭೂಮರಡ್ಡಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಾಚಾರ್ಯ ಡಾ. ಎಸ್.ಎನ್. ಶಿವರಡ್ಡಿ ಪರೀಕ್ಷೆ ನಡೆಯುವ ಕೇಂದ್ರ ಪರಿಶೀಲಿಸಿದರು.
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಶಿವರಡ್ಡಿ ಅವರು, ಎಸ್.ಎಂ. ಭೂಮರಡ್ಡಿ ಕೇಂದ್ರದಲ್ಲಿ ಒಟ್ಟು 583 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜತೆಗೆ ಸ್ಥಳೀಯ ರಾಷ್ಟ್ರೀಯ ಜ್ಞಾನ ವಿಕಾಸ ಪಪೂ, ಸೂಡಿಯ ಗುರುಮಹಾಂತೇಶ ಪಪೂ ಹಾಗೂ ನಿಡಗುಂದಿಯ ಸರ್ಕಾರಿ ಪಪೂ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಈ ಕೇಂದ್ರದಲ್ಲಿ ಪರೀಕ್ಷೆ ಎದುರಿಸಲಿದ್ದಾರೆ. ಮಾ. 12ರಂದು ರಾಜ್ಯಶಾಸ್ತ್ರ ಪರೀಕ್ಷೆ ನಡೆಯಲಿದ್ದು 282 ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಯಾವುದೇ ನಕಲು, ಅಕ್ರಮ ನಡೆಯದಂತೆ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಇನ್ನೊಂದೆಡೆ ಪಟ್ಟಣದ ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದಲ್ಲಿ 682 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ವಿಘ್ನೇಶ್ವರ ಪಪೂ ಕಾಲೇಜು, ಕೆಎಸ್‌ಎಸ್ ಪಪೂ ಹಾಗೂ ಮುಶಿಗೇರಿಯ ಸರ್ಕಾರಿ ಪಪೂ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಈ ಕೇಂದ್ರದಲ್ಲಿ ಪರೀಕ್ಷೆಗೆ ಹಾಜರಾಗಲಿದ್ದಾರೆ ಎಂದು ಪ್ರಾಚಾರ್ಯ ಆರ್.ವೈ. ಮಾಡಲಗೇರಿ ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement