ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ವಿದ್ಯಾರ್ಥಿಗಳು ಮೌಲ್ಯ ಅಳವಡಿಸಿಕೊಳ್ಳಲಿ

Rashmi Kasaragodu
Updated On : 12 Mar 2014, 3:02 am

ಕನ್ನಡಪ್ರಭ ವಾರ್ತೆ, ನರೇಗಲ್ಲ, ಮಾ. 11
ವಿದ್ಯಾರ್ಥಿಗಳು ಜೀವನದಲ್ಲಿ ಮೌಲ್ಯ ಅಳವಡಿಸಿಕೊಳ್ಳಬೇಕು. ಇದರಿಂದ ಬದುಕು ಸುಂದರವಾಗುತ್ತದೆ. ಮೌಲ್ಯಗಳನ್ನು ಕಲಿಯಲು ಮಹಾತ್ಮರ ಜೀವನ ಚರಿತ್ರೆಗಳನ್ನು ಓದುವುದನ್ನು ರೂಢಿಸಿಕೊಳ್ಳಬೇಕು ಎಂದು ಶಾಸಕ ಜಿ.ಎಸ್. ಪಾಟೀಲ ವಿದ್ಯಾರ್ಥಿಗಳಿಗೆ ಕರೆ ನೀಡಿದರು.
ಅವರು ಈಚೆಗೆ ಸ್ಥಳೀಯ ಕೋಡಿಕೊಪ್ಪದಲ್ಲಿರುವ ಪಿಎಸ್‌ಎಸ್ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕೋತ್ಸವ ಮತ್ತು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು. ಇಂದಿನ ದಿನಗಳಲ್ಲಿ ಸಮಾಜದಲ್ಲಿ ಮೌಲ್ಯಗಳೇ ಕಾಣೆಯಾಗುತ್ತಿವೆ. ಇವುಗಳನ್ನು ಮತ್ತೆ ಮರು ಸ್ಥಾಪಿಸುವಲ್ಲಿ ನಾವೆಲ್ಲರೂ ಶ್ರಮಿಸಬೇಕಿದೆ ಎಂದರು.
ಹಿರಿಯ ನ್ಯಾಯವಾದಿ ಆರ್.ವಿ. ಗುಡಿಸಾಗರ ವಿದ್ಯಾರ್ಥಿಗಳಿಗೆ ಪಾರಿತೋಷಕ ವಿತರಿಸಿದರು. ಆಡಳಿತ ಮಂಡಳಿಯ ಸದಸ್ಯರು ಉಪಸ್ಥಿತರಿದ್ದರು. ಸಂಸ್ಥೆಯ ಅಧ್ಯಕ್ಷ ಡಾ. ಕೆ.ಬಿ. ಧನ್ನೂರ ಅಧ್ಯಕ್ಷತೆ ವಹಿಸಿದ್ದರು. ಹುಚ್ಚೀರೇಶ್ವರ ಕ್ರೀಡಾ ಸಂಸ್ಥೆಯ ವಿದ್ಯಾರ್ಥಿಗಳಿಂದ ನಡೆದ ಮಲ್ಲಕಂಬ ಪ್ರದರ್ಶನ ಜರುಗಿತು. ಕಾರ್ಯದರ್ಶಿ ಬಿ.ಎಫ್. ಚೇಗರಡ್ಡಿ ಸ್ವಾಗತಿಸಿದರು. ಮುಖ್ಯೋಪಾಧ್ಯಾಯಿನಿ ಇಂದಿರಾ ನಾಯಕ ವರದಿ ವಾಚನ ನೀಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement