ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಭಾರತ ನಿರ್ಮಾಣ ಪಾದಯಾತ್ರೆಗೆ ಚಾಲನೆ

Lingaraj Badiger
Updated On : 14 Mar 2014, 11:20 am

ನರಗುಂದ: ಲೋಕಸಭಾ ಚುನಾವಣೆ ನಿಮಿತ್ತ ರಾಜ್ಯ ಹಾಗೂ ಕೇಂದ್ರ ಸರ್ಕಾರವು ಬಡವರಿಗೆ ಮತ್ತು ಅಲ್ಪಸಂಖ್ಯಾತ ಎಲ್ಲ ವರ್ಗದ ಜನಾಂಗದ ಅಭಿವೃದ್ಧಿಗೆ ಹಲವಾರು ಯೋಜನೆಗಳ ಬಗ್ಗೆ ನರಗುಂದ ವಿಧಾನಸಭಾ ಮತಕ್ಷೇತ್ರದ ಜನತೆಗೆ ಪಾದಯಾತ್ರೆ ಮಾಡುವ ಮೂಲಕ ಜಾಗೃತಿ ಮೂಡಿಸಲಾಗುವುದೆಂದು ಶಾಸಕ ಬಿ.ಆರ್. ಯಾವಗಲ್ ಹೇಳಿದರು. ಈಚೆಗೆ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಭಾರತ ನಿರ್ಮಾಣ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಹಲವಾರು ಕಾರ್ಯಕ್ರಮಗಳ ಬಗ್ಗೆ ಜನರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿಸಿ ಭಾರತ ನಿರ್ಮಾಣಕ್ಕೆ ಮುಂದಾಗಬೇಕೆಂದು ಕರೆ ನೀಡಿದರು. ಈ ಸಂದರ್ಭ ಚಂಬಣ್ಣ ವಾಳದ, ಎಸ್.ಡಿ. ಕೊಳ್ಳಿ, ರಾಜು ಕಲಾಲ, ಪುರಸಭೆ ಸದಸ್ಯ ಸಿ.ಬಿ. ಪಾಟೀಲ, ಎಸ್.ಆರ್. ಪಾಟೀಲ, ನಾಗಪ್ಪ ನವಲಗುಂದ, ಸುರೇಶ ಸದವತ್ತಿ, ಮಹೇಶ ಬಡಿಗೇರ, ವಿಠ್ಠಲ್ ಶಿಂದೆ, ದ್ಯಾಮಣ್ಣ ಸವದತ್ತಿ, ಎಫ್.ವೈ. ದೊಡಮನಿ ಮುಂತಾದವರು ಉಪಸ್ಥಿತರಿದ್ದರು.
ನರಗುಂದ: ಇಂದು ಬಿಜೆಪಿ ಸಭೆ
ನರಗುಂದ: ಪಟ್ಟಣದ ಬಿಜೆಪಿ ಕಚೇರಿಯಲ್ಲಿ ಮಾ. 14ರಂದು ಮಧ್ಯಾಹ್ನ 3ಕ್ಕೆ ಬಾಗಲಕೋಟೆ ಲೋಕಸಭಾ ಚುನಾವಣಾ ಪೂರ್ವಭಾವಿ ಸಭೆ ಜರುಗಲಿದ್ದು, ಸಭೆಗೆ ಸಂಸದ ಪಿ.ಸಿ. ಗದ್ದಿಗೌಡ್ರ, ಮಾಜಿ ಸಚಿವ ಸಿ.ಸಿ. ಪಾಟೀಲ, ಗದಗ ಜಿಲ್ಲಾ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಸಚಿವ ಕಳಕಪ್ಪ ಬಂಡಿ, ಮುಧೋಳ ಶಾಸಕ ಗೋವಿಂದ ಕಾರಜೋಳ, ಮಾಜಿ ಸಚಿವ ಮುರಗೇಶ ನಿರಾಣಿ, ಮಾಜಿ ಶಾಸಕ ಸಿದ್ದು ಸವದಿ, ಬಾಗಲಕೋಟೆ ವೀರಣ್ಣ ಚರಂತಿಮಠ, ತೇರದಾಳ ಮಾಜಿ ಶಾಸಕ ಶ್ರೀಕಾಂತ ಕುಲಕರ್ಣಿ, ಮಾಜಿ ಶಾಸಕ ಎಂ.ಕೆ. ಪಟ್ಟಣಶಟ್ಟಿ, ದೊಡ್ಡನಗೌಡ ಪಾಟೀಲ ಮುಂತಾದವರು ಭಾಗವಹಿಸಲಿದ್ದು, ಕಾರಣ ಸಭೆಗೆ ಪಕ್ಷದ ಚುನಾಯಿತ ಪ್ರತಿನಿಧಿಗಳು, ಪಕ್ಷದ ಪದಾಧಿಕಾರಿಗಳು, ಬೂತಮಟ್ಟದ ಏಜೆಂಟರು, ಪಕ್ಷದ ಎಲ್ಲ ಮೋರ್ಚಾಗಳ ಪದಾಧಿಕಾರಿಗಳು ಮತ್ತು ಪಕ್ಷದ ಎಲ್ಲ ಪ್ರಮುಖರು ಈ ಸಭೆಯಲ್ಲಿ ಭಾಗವಹಿಸಿ ಸಲಹೆ, ಸೂಚನೆಗಳನ್ನು ನೀಡುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
--

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement