ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ನಿಯಂತ್ರಣ ಪ್ರಾಧಿಕಾರ ರಚಿಸಲು ಆಗ್ರಹ

Srinivasa Murthy VN
Updated On : 22 Mar 2014, 11:56 am

ಹಾವೇರಿ: ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ನೀತಿ ನಿಯಮ ಮೀರಿ ಡೊನೇಶನ್ ಪಡೆಯುತ್ತಿರುವುದನ್ನು ನಿಯಂತ್ರಿಸಲು ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರ ರಚಿಸಬೇಕು ಎಂದು ಒತ್ತಾಯಿಸಿ ಎಸ್‌ಎಫ್‌ಐ ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿತು.
ಎಸ್‌ಎಫ್‌ಐ ಕಾರ್ಯಕರ್ತರು ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೇರಿ ಡೋನೇಶನ್ ಹಾವಳಿ ತಡೆಯುವಂತೆ ಒತ್ತಾಯಿಸಿದರು. ನಿತ್ಯಾನಂದ ಸ್ವಾಮೀಜಿ ಮಾತನಾಡಿ, ರಾಜ್ಯದಲ್ಲಿ ಶಾಲಾ-ಕಾಲೇಜುಗಳಲ್ಲಿ ಪ್ರವೇಶ ಪ್ರಕ್ರಿಯೆಗಳು ನಡೆಯುತ್ತಿವೆ. ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರದ ನೀತಿ ನಿಯಮಗಳನ್ನು ಮೀರಿ ಡೊನೇಶನ್ ವಸೂಲಿಯಲ್ಲಿ ತೊಡಗಿವೆ. ದಾಖಲಾತಿ ಸಂಗ್ರಹಿಸಬೇಕಾದ ಶುಲ್ಕ, ಪಾಲಿಸಬೇಕಾದ ಮೀಸಲಾತಿ ನಿಯಮಗಳ ಬಗ್ಗೆ ಸರ್ಕಾರ ನಿಯಮಗಳನ್ನು ರಚಿಸಿದೆ. ಆದರೆ, ಹೆಚ್ಚಿನ ಹಣವನ್ನು ಒತ್ತಾಯದ ಮೂಲಕ ಸಂಗ್ರಹಿಸುತ್ತಿವೆ. ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿ ಪ್ರತಿನಿಧಿಗಳು, ಪೋಷಕರು, ಶಿಕ್ಷಣ ಸಂಸ್ಥೆಗಳನ್ನೊಳಗೊಂಡಂತೆ ಸಮಿತಿ ರಚಿಸಿ ಅಲ್ಲಿ ಈ ಕುರಿತು ಚರ್ಚಿಸಬೇಕು. ಆದರೆ, ಅದು ಎಲ್ಲಿಯೂ ಜಾರಿಯಾಗುತ್ತಿಲ್ಲ. ಡೊನೇಶನ್ ವಸೂಲಿಯನ್ನು ನಿಯಂತ್ರಿಸಲು ಜಿಲ್ಲಾ ಶಿಕ್ಷಣ ರೆಗ್ಯುಲೇಟಿಂಗ್ ಪ್ರಾಧಿಕಾರವನ್ನು ರಚಿಸಬೇಕು ಎಂದು ಆಗ್ರಹಿಸಿದರು. ಎಸ್‌ಎಫ್‌ಐ ಕೆಂದ್ರ ಸಮಿತಿ ಸದಸ್ಯ ಹುಳ್ಳಿ ಉಮೇಶ್ ಮಾತನಾಡಿ, ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿರುವ ಈ ಪ್ರಾಧಿಕಾರಕ್ಕೆ ಅಧಿಕಾರಿಗಳು ಸದಸ್ಯರಾಗಿರುತ್ತಾರೆ. ಈ ಸಮಿತಿಯು ಅಕ್ರಮವಾಗಿ ಡೊನೇಷನ್ ವಸೂಲಿ, ಪ್ರವೇಶ ಮೀಸಲಾತಿಯಲ್ಲಿ ಅನ್ಯಾಯ ಆಗದಂತೆ ಕ್ರಮವಹಿಸಲು ಮುಂದಾಗಬೇಕೆಂಬ ನಿಯಮವಿದ್ದರೂ ಬಹುತೇಕ ಜಿಲ್ಲೆಗಳಲ್ಲಿ ಈ ಸಮಿತಿಯೇ ರಚನೆಯಾಗಿಲ್ಲ. ಹೀಗಾಗಿ ಎಲ್ಲೆ ಇಲ್ಲದೇ ಡೊನೇಶನ್ ವಸೂಲಿ ನಡೆಯುತ್ತಿದೆ. ಪ್ರಾಧಿಕಾರವು ಹಲ್ಲು ಕಿತ್ತ ಹಾವಿನಂತಾಗಿರುವ ಕಾರಣ ಕೆಲವು ಶಿಕ್ಷಣ ಸಂಸ್ಥೆಗಳು ಲಕ್ಷಾಂತರು ಹಣ ವಂತಿಗೆ ವಸೂಲಿ ಮಾಡುತ್ತಿವೆ. ಸರ್ಕಾರ ಇದರ ನಿಯಂತ್ರಣಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು.
ಈ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸದೇ ಹೋದಲ್ಲಿ ಎಸ್‌ಎಫ್‌ಐ ಜಿಲ್ಲಾ ಸಮಿತಿ ಉಗ್ರ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಸಿದರು. ಎಸ್‌ಎಫ್‌ಐ ರಾಜ್ಯ ಉಪಾಧ್ಯಕ್ಷ ಬಸವರಾಜ ಪೂಜಾರ ಮಾತನಾಡಿದರು. ಎಸ್‌ಎಫ್‌ಐ ಜಿಲ್ಲಾಧ್ಯಕ್ಷೆ ರೇಣುಕಾ ಕಹಾರ, ಜಿಲ್ಲಾ ಕಾರ್ಯದರ್ಶಿ ಎಂ. ಸುಭಾಸ, ಮಲ್ಲಿಕಾರ್ಜುನ ಹಿರೇಮಠ, ಪ್ರಸನ್ನ ಹಿರೇಮಠ, ಅಮಿತ ಶಿವಳ್ಳಿ, ರಾಜು, ಮಹಮ್ಮದರಫೀಕ್ ನದಾಫ, ಶಾಂತ ನಡಿಗೇರಿ, ಚಂದ್ರು ಬಿ. ಎಸ್., ಅರುಣ, ಮುತ್ತು, ಮಂಜು ಬಾರ್ಕಿ, ಗೀರಿಶ ಪಾಟೀಲ, ಗಣೇಶ ಸಂಗೂರ, ಮುರುಗೇಶ, ಶ್ರೀಕಾಂತ ಬಂಕಾಪುರ, ಶಿವಕುಮಾರ ಕುಂಬಾರ, ಖಾಜಾ ಅಕ್ಕಿ, ಪ್ರವೀಣ ಗುಳೇದ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement