ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮತದಾನ ಚೀಟಿ ತಲುಪಿಸಿ

Srinivasa Murthy VN
Updated On : 27 Mar 2014, 10:54 am

ನರಗುಂದ: ಏಪ್ರಿಲ್ 17ರಂದು ನಡೆಯುವ ಲೋಕಸಭಾ ಚುನಾವಣೆಗೆ ಮತದಾನ ಮಾಡುವ ಮತ ಚೀಟಿಗಳನ್ನು ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರು ತಪ್ಪದೇ ಮತದಾರರಿಗೆ ಮುಂಚಿತವಾಗಿ ಮುಟ್ಟಿಸಬೇಕೆಂದು ಜಿಲ್ಲಾಧಿಕಾರಿ ಎಸ್.ಎನ್. ಪ್ರಸನ್ನಕುಮಾರ ಹೇಳಿದರು.
ಅವರು ಬುಧವಾರ ಪಟ್ಟಣ ತಾಪಂ ಸಭಾ ಭವನದಲ್ಲಿ ತಾಲೂಕಿನ ಅಂಗನವಾಡಿ ಹಾಗೂ ಆಶಾ ಕಾರ್ಯಕರ್ತೆಯರಿಗೆ ಮತದಾನ ಜಾಗೃತಿ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದರು. ಮತದಾರರಿಗೆ ನಿಮ್ಮ ನಿಮ್ಮ ಊರು ವಾರ್ಡ್‌ಗಳಲ್ಲಿ ಮತದಾರರಿಗೆ ಕಡ್ಡಾಯವಾಗಿ ಮತದಾನ ಮಾಡಲು ತಿಳಿವಳಿಕೆ ನೀಡಲು ಸಹ ಮುಂದಾಗಬೇಕಾಗುತ್ತದೆ ಎಂದರು.
ಜಿಪಂ ಕಾರ್ಯನಿರ್ವಾಹಕ ಅಧಿಕಾರಿ ವೀರಣ್ಣ ತುರಮರಿ ಮಾತನಾಡಿ, ಈ ಲೋಕಸಭಾ ಚುನಾವಣೆಯಲ್ಲಿ ಪ್ರತಿಯೊಬ್ಬರು ಮತದಾನ ಮಾಡುವ ರೀತಿ ಗ್ರಾಮೀಣ ಹಾಗೂ ಪಟ್ಟಣದ ಪ್ರದೇಶಗಳಲ್ಲಿ ಮತದಾರರಿಗೆ ಜಾಗೃತಿಯನ್ನು ಮುಟ್ಟಿಸಿ, ನಾವು ನೀವು ಎಲ್ಲರೂ ಸೇರಿ ಅಚ್ಚುಕಟ್ಟಾಗಿ ಎಲ್ಲ ಮತದಾರರನ್ನು ಮತದಾನ ಮಾಡಿಸಲು ಮುಂದಾಗಬೇಕು ಎಂದರು.
ಚುನಾವಣಾಧಿಕಾರಿ ಶಿವನಗೌಡ ಪಾಟೀಲ ಪ್ರಾಸ್ತಾವಿಕವಾಗಿ ಮಾತನಾಡಿದರು. ಇದೇ ಸಂದರ್ಭದಲ್ಲಿ ತಾಲೂಕಿನ ಕೊಣ್ಣೂರು ಗ್ರಾಮದ ಜೈ ಕಿಸಾನ್ ಕಲಾ ತಂಡದಿಂದ ಚುನಾವಣೆ ನಿಮಿತ್ತ ಮತದಾರರನ್ನು ಜಾಗೃತಿ ಮೂಡಿಸಲು ವಿವಿಧ ತತ್ವ ಪದಗಳನ್ನು ಹಾಡಿದರು. ಸಹಾಯಕ ಚುನಾವಣಾಧಿಕಾರಿ ಅಶೋಕ ಕಲಘಟಗಿ, ತಹಸೀಲ್ದಾರ್ ಎ.ಎಚ್. ಕೊತಬಾಳ, ತಾಪಂ ಅಧಿಕಾರಿ ನಂದಕುಮಾರ ಗುಂಡಾ, ಪುರಸಭೆ ಅಧಿಕಾರಿ ಎಸ್. ರಾಜಶೇಖರ, ಶಿಕ್ಷಣಾಧಿಕಾರಿ ಸುರೇಶ ಹುಗ್ಗಿ, ಟಿ.ದಿನೇಶ, ಕೆ.ವಿ. ಮುಧೋಳೆ, ಶಿಶು ಅಭಿವೃದ್ಧಿ ಇಲಾಖೆ ಪ್ರಭಾರ ಅಧಿಕಾರಿ ಎಸ್.ಎಸ್. ಮುದರಡ್ಡಿ, ತಾಲೂಕು ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತರು, ಗ್ರಾಪಂ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ತಾಪಂ, ಪುರಸಭೆ ಆರೋಗ್ಯ ಇಲಾಖೆಯ ಸಿಬ್ಬಂದಿ ಹಾಜರಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement