ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಸುಪ್ರೀಂ ತೀರ್ಪಿಗೆ ರಾಜ್ಯದ ನಿರ್ಲಕ್ಷ್ಯ ಕಾರಣ

Mainashree
Updated On : 8 May 2014, 10:43 am

ಗಂಗಾವತಿ: ಪ್ರಾಥಮಿಕ ಶಿಕ್ಷಣಕ್ಕೆ ಮಾತೃಭಾಷೆ ಕಡ್ಡಾಯವಲ್ಲ ಎಂದು ಸುಪ್ರೀಂಕೋರ್ಟ್ ನೀಡಿದ ತೀರ್ಪು ರಾಜ್ಯ ಸರ್ಕಾರವು ಮಾತೃಭಾಷೆ ಕುರಿತು ತಳೆದಿರುವ ಧೋರಣೆ ಎತ್ತಿ ತೋರಿಸುತ್ತದೆ ಎಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ)ಯ ಜಿಲ್ಲಾಧ್ಯಕ್ಷ ಪಂಪಣ್ಣ ನಾಯಕ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ತಹಸೀಲ್ದಾರ್ ಗಂಗಣ್ಣ ಅವರ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ  ಇತ್ತೀಚೆಗೆ ಖಾಸಗಿ ಶಾಲೆಗಳು ಕನ್ನಡ ಭಾಷೆ ಕಡೆಗಣಿಸುವಂತೆ ವತಿಸುತ್ತಿದ್ದರೂ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಯಾವುದೇ ಕ್ರಮ ಜರುಗಿಸುವಲ್ಲಿ ವಿಫಲವಾದ ಸರ್ಕಾರ ಸುಪ್ರೀಂಕೋರ್ಟ್ಗೆ ಮಾತೃಭಾಷೆ ಕುರಿತು ವಿವರಿಸುವಲ್ಲಿ ಎಡವಿದ ಪರಿಣಾಮ ಪೀಠವು ಈ ತೀರ್ಪು ನೀಡಲು ಕಾರಣವಾಗಿದೆ ಎಂದು ಆರೋಪಿಸಿದರು. ಸಂಘಟನೆ ತಾಲೂಕು ಅಧ್ಯಕ್ಷ ಅರ್ಜುನ ನಾಯಕ, ನಗರಾಧ್ಯಕ್ಷ ಚಂದ್ರಶೇಖರ್ ಶೆಟ್ಟಿ, ಉಪಾಧ್ಯಕ್ಷ ಬಸವರಾಜ ಮಾಂತಗೊಂಡ, ಸಮರಸೇನೆ ಅಧ್ಯಕ್ಷ ಕಾರ್ತಿಕ್, ಪ್ರಧಾನ ಕಾರ್ಯದರ್ಶಿ ಶಂಕರ ಪೂಜಾರಿ, ಸಂಘಟನಾ ಕಾರ್ಯದರ್ಶಿ ಎಂ. ಹುಲುಗಪ್ಪ, ಸಹ ಕಾರ್ಯದರ್ಶಿ ಭರಮಪ್ಪ, ಕಾಶೀಂಸಾಬ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement