ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ಮಾರಾಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿ ಕೊಲೆ

Rashmi Kasaragodu
Updated On : 26 May 2014, 12:07 pm

ಗದಗ: ಮಾರಾಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿರುವ ಘಟನೆ ಗದಗ ತಾಲೂಕಿನ ಸೊರಟೂರು ಗ್ರಾಮದಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು ಗ್ರಾಮದ ಶೇಖಪ್ಪ ತಳವಾರ (65) ಎಂದು ಗುರುತಿಸಲಾಗಿದೆ. ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಸೊರಟೂರು ಗ್ರಾಮದ ಹೊರವಲಯದ ಜಮೀನಿನಲ್ಲಿ ಶೇಖಪ್ಪ ಅವರನ್ನು ಕೊಲೆ ಮಾಡಲಾಗಿದೆ. ನಿನ್ನೆ ತಡರಾತ್ರಿ ಈ ಘಟನೆ ನಡೆದಿದ್ದು, ಸ್ಥಳಕ್ಕೆ ಮುಳಗುಂದ ಪೊಲೀಸರು ಭೇಟಿ ನೀಡಿ ಪರೀಶಿಲನೆ ನಡೆಸಿ, ತನಿಖೆ ಕೈಗೊಂಡಿದ್ದಾರೆ.
ಲಕ್ಷ್ಮಣಸಿಂಗ್ ಬ್ಯಾಳಿ ನಿಧನ
ಗದಗ: ಸ್ಥಳೀಯ ಅಂಬೇಡ್ಕರ್ ನಗರದ ನಿವಾಸಿ, ಗಂಗಾವತಿ ಮತ್ತು ಗದಗ-ಬೆಟಗೇರಿ ರಜಪೂತ ಸಮಾಜದ ಹಿರಿಯ ಲಕ್ಷ್ಮಣಸಿಂಗ್ ಬ್ಯಾಳಿ (78) ಶನಿವಾರ ರಾತ್ರಿ ನಿಧನರಾದರು. ಮೃತರಿಗೆ ಮೂವರು ಪುತ್ರರು, ನಾಲ್ವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗ ಇದ್ದಾರೆ.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement