ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗದಗ

ವಸತಿ ರಹಿತರ ಅನಿರ್ದಿಷ್ಟ ಧರಣಿ ನಿರ್ಧಾರ

Rashmi Kasaragodu
Updated On : 26 May 2014, 12:07 pm

ಗದಗ: ಕಳೆದ ಒಂದು ವರ್ಷದಿಂದ ಜಿಲ್ಲಾ ಕೊಳಚೆ ನಿವಾಸಿಗಳ ಹಿತರಕ್ಷಣಾ ಸಮಿತಿಯಿಂದ ನಗರದ ವಸತಿ ರಹಿತರಿಗೆ ನಿವೇಶಗಳನ್ನು ಒದಗಿಸುವುದು ಹಾಗೂ ಮನೆಗಳನ್ನು ಹಂಚಿಕೆ ಮಾಡಬೇಕೆಂದು ಆಗ್ರಹಿಸಿ ನಿರಂತರ ಹೋರಾಟಗಳನ್ನು ನಡೆಸುತ್ತ ಸ್ಥಳೀಯ ಜನಪ್ರತಿನಿಧಿಗಳಿಗೆ ಹಾಗೂ ಜಿಲ್ಲಾಧಿಕಾರಿಗಳಿಗೆ ಮನವಿಗಳು ನೀಡಿದರೂ, ಜಿಲ್ಲಾಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ವಸತಿ ರಹಿತರ ಬೇಡಿಕೆಗಳನ್ನು ಕಡೆಗಣಿಸಿರುವುದನ್ನು ಖಂಡಿಸಿ ಮುಂದಿನ ದಿನಗಳಲ್ಲಿ ಅನಿರ್ದಿಷ್ಟಾವಧಿ ಧರಣಿ ಸತ್ಯಾಗ್ರಹ ನಡೆಲಾಗುವುದು ಎಂದು ಸ್ಲಂ ಸಮಿತಿ ಪ್ರಧಾನ ಕಾರ್ಯದರ್ಶಿ ಇಮ್ತಿಯಾಜ್ ಮಾನ್ವಿ ಹೇಳಿದರು.
ನಗರದಲ್ಲಿ ನಡೆದ ವಸತಿರಹಿತರ ಮತ್ತು ಸ್ಲಂ ನಿವಾಸಿಗಳ ಸಭೆ ಉದ್ದೇಶಿಸಿ ಮಾತನಾಡಿ, ನಗರದ ಗಂಗಿಮಡಿ ಹತ್ತಿರವಿರುವ ಸರ್ಕಾರಿ ಭೂಮಿಯಲ್ಲಿ ಕಳೆದ 2004 ರಲ್ಲಿ 330 ಬಡ ಕುಟುಂಬಗಳಿಗೆ ನಿವೇಶನಗಳನ್ನು ಹಂಚಿಕೆ ಮಾಡಲಾಗಿದೆ. ಈವರೆಗೂ ಜನಪ್ರತಿನಿಧಿಗಳು ಹಾಗೂ ಜಿಲ್ಲಾಧಿಕಾರಿಗಳು ಬಡ ಕುಟುಂಬಗಳಿಗೆ ನಿವೇಶನ ಹಂಚಿಕೆ ಮಾಡಲು ಹಿಂದೇಟು ಹಾಕುತ್ತಿದ್ದಾರೆ ಆರೋಪಿಸಿದರು.
ಸಮಿತಿ ಅಧ್ಯಕ್ಷ ಅಶೋಕ ಮ್ಯಾಗೇರಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಹಿಳಾ ಸಮಿತಿ ಅಧ್ಯಕ್ಷ ಉಮಾದೇವಿ ಕಾತರಕಿ, ಕಾರ್ಯದರ್ಶಿ ತಿಪ್ಪವ್ವ ಮುಟಗಾರ, ಯುವ ಸಮಿತಿ ಅಧ್ಯಕ್ಷ ಶರೀಫ ಬಿಳೆಯಲಿ, ಉಪಾಧ್ಯಕ್ಷ ಯಲಪ್ಪ ರಾಮಗಿರಿ, ಅಶೋಕ ಕುಸಬಿ, ಅಬುಬಕರ ಮಕಾಂದಾರ, ಇಬ್ರಾಹಿಂ ಮುಲ್ಲಾ, ಆರತಿ. ಎನ್. ಅನೀಲ ಕಾಳೆ, ಬಸವರಾಜ ಬಿಳೆಯಲಿ, ರಾಜು ಕಣಗಿನಹಾಳ, ಯುಸುಫ ಮಜ್ಜಗಿ, ನಾಗರಾಜ ಮುಟಗಾರ, ಮಮ್ತಾಜಬೇಗಂ ಮಕಾಂದಾರ, ಮೇಹರುನಿಸ್ಸಾ ಢಾಲಾಯತ, ಪೀರಸಾಬ ಬಳ್ಳಾರಿ, ಶಹಜಾನಬಿ ಕರ್ನಾಚಿ, ಗೌರಮ್ಮ ಶಿರಗುಪ್ಪಿ ಉಪಸ್ಥಿತರಿದ್ದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement