ಐಯುಎಂಎಲ್ ಪಕ್ಷದಿಂದ 13 ಅಭ್ಯರ್ಥಿಗಳು ಕಣಕ್ಕೆ: ಖಾದಿರ್
ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಏ.4
ವಿಧಾನಸಭೆ ಚುನಾವಣೆಯಲ್ಲಿ ಇಂಡಿಯನ್ ಯುನಿಯನ್ ಮುಸ್ಲಿಂ ಲೀಗ್ ಪಕ್ಷದಿಂದ ರಾಜ್ಯದ 13 ಸ್ಥಾನಗಳಲ್ಲಿ ಸ್ಪರ್ಧಿಸಲಾಗುವುದು ಎಂದು ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರೊ. ಖಾದಿರ್ ಮೋಯೋದ್ದೀನ್ ಹೇಳಿದರು.
ಅವರು ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಲ್ಪಸಂಖ್ಯಾತರ ಮತಗಳನ್ನು ಪಡೆದು ಅಧಿಕಾರಕ್ಕೆ ಬರುವ ಪಕ್ಷಗಳು ಅವರಿಗಾಗಿ ಏನೂ ಮಾಡುತ್ತಿಲ್ಲ. ಅಧಿಕಾರಕ್ಕಾಗಿ ಪಕ್ಷಗಳು ಮತ್ತು ಅವುಗಳ ಮುಖಂಡರು ಮಾತ್ರ ಹವಣಿಸುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ನಮ್ಮ ಪಕ್ಷದಿಂದ ಅಭ್ಯರ್ಥಿಗಳು ಚುನಾಯಿತರಾದರೆ ಬಿಜೆಪಿ ಹೊರತುಪಡಿಸಿ ಜಾತ್ಯತೀತ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದ ಅವರು, ಜಿಲ್ಲೆಯಲ್ಲಿ ಪಕ್ಷದ ಮುಖಂಡರೊಂದಿಗೆ ಚರ್ಚಿಸಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದರು. ಸುದ್ದಿಗೋಷ್ಠಿಯಲ್ಲಿ ಕುರುಮ್ ಅನೀಸ್ ಉಮರ್, ಎಚ್. ಅಬ್ದುಲ್ ಬಾಸಿದ್, ಎಂ.ಎಸ್. ಇನಾಂದಾರ, ದಸ್ತಗಿರಿ ಆಗಾ, ಮೊಹ್ಮದ್ ಇಕ್ಬಾಲ್ ಇತರರು ಇದ್ದರು.