ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ದಂಗಾಪುರ ಆರೋಪ ನಿರಾಧಾರ: ಅಲ್ಲಂಪ್ರಭು

Lingaraj Badiger
Updated On : 5 Apr 2013, 11:07 am

ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಏ.4
ಆಳಂದ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರು ಸ್ಥಳೀಯ ನಾಯಕರನ್ನು ಪರಿಗಣನೆಗೆ ತೆಗೆದುಕೊಳ್ಳದೇ ಏಕಪಕ್ಷೀಯ ನಿರ್ಣಯ ಕೈಗೊಂಡಿದ್ದಾರೆ ಎಂದು ಆರೋಪಿಸಿರುವ ಮಾಜಿ ಶಾಸಕ ಶರಣಬಸಪ್ಪ ಪಾಟೀಲ್ ದಂಗಾಪುರ ಅವರ ಆರೋಪ ನಿರಾಧಾರ ಎಂದು ವಿಧಾನ ಪರಿಷತ್ ಸದಸ್ಯ ಅಲ್ಲಂಪ್ರಭು ಪಾಟೀಲ್ ಹಾಗೂ ಆಳಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುಶಾಂತ ಪಾಟೀಲ್ ನಿಂಬಾಳ ಹೇಳಿದರು.
ಅವರು ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ತಮಗೆ ಬೇಕಾದವರಿಗೆ ಟಿಕೆಟ್ ನೀಡುವ ಸಲುವಾಗಿ ಈ ರೀತಿ ಧರ್ಮಸಿಂಗ್ ಅವರ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ ಎಂದರು.
ಪಕ್ಷದ ಹಿರಿಯ ಮುಖಂಡರಾದ ಜಗನ್ನಾಥ ಶೇಗಜಿ, ಶಿವರಾಜ ಬಾಸಗಿ, ಡಾ. ಕಿರಣ ದೇಶಮುಖ, ಬಸವರಾಜ ಪಾಟೀಲ್ ದಂಗಾಪುರ ಹಾಗೂ ಸೂರ್ಯಕಾಂತ ಕೋರಳಿ ಚುನಾವಣಾ ಆಕಾಂಕ್ಷಿಗಳಾಗಿದ್ದು, ಇನ್ನೂ ಯಾವ ಅಭ್ಯರ್ಥಿ ಹೆಸರು ಅಂತಿಮಗೊಂಡಿಲ್ಲ. ಧರ್ಮಸಿಂಗ್ ಅವರು ಇದರಲ್ಲಿ ಯಾವುದೇ ಹಸ್ತಕ್ಷೇಪ ಮಾಡುತ್ತಿಲ್ಲ. ಆಳಂದ ತಾಲೂಕಿನ ಎಲ್ಲ ಘಟಕಗಳ ಮುಖಂಡರ ಸಲಹೆ ಮತ್ತು ಸೂಚನೆ ಮೇರೆಗೆ ಅಭ್ಯರ್ಥಿ ಹೆಸರು ಹೈಕಮಾಂಡ್ ಅಂತಿಮಗೊಳಿಸಲಿದೆ ಎಂದು ಸ್ಪಷ್ಟಪಡಿಸಿದರು.
ಮಾಜಿ ಮುಖ್ಯಮಂತ್ರಿ ಧರ್ಮಸಿಂಗ್ ಅವರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡಿರುವ ದಂಗಾಪುರ ವಿರುದ್ಧ ಶಿಸ್ತಿನ ಕ್ರಮ ಜರುಗಿಸುವಂತೆ ಪಕ್ಷದ ಜಿಲ್ಲಾಧ್ಯಕ್ಷ ಹಾಗೂ ರಾಜ್ಯಾಧ್ಯಕ್ಷರಿಗೆ ದೂರು ಸಲ್ಲಿಸುವುದಾಗಿ ಆಳಂದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುರುಶಾಂತ ಪಾಟೀಲ್ ನಿಂಬಾಳ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಶಿವರಾಜ ಬಾಸಗಿ, ವಿಜಯಕುಮಾರ ಮಂಗಾಣೆ, ಕಲ್ಯಾಣ ಕಾಂಬಳೆ, ಅಹ್ಮದ್ ಅಲಿ ಮಾಸ್ಟರ್, ರವಿಕಾಂತ ಪಾಟೀಲ್ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement