ಎನ್ನೆಸ್ಸೆಸ್ ಶಿಬಿರದಲ್ಲಿ ಮತದಾನ ಅರಿವು
ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಏ.7
ಶರಣಬಸವೇಶ್ವರ ವಾಣಿಜ್ಯ ಮಹಾವಿದ್ಯಾಲಯದಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ಶಿಬಿರದ ಎರಡನೇ ದಿನದ ಕಾರ್ಯಕ್ರಮದಲ್ಲಿ ಮತದಾನದ ಅರಿವು ಮೂಡಿಸಲಾಯಿತು.
ನಗರದ ಗೋದುತಾಯಿ ಮಹಿಳಾ ಮಹಾವಿದ್ಯಾಲಯದ ರಾಜ್ಯಶಾಸ್ತ್ರ ಪ್ರಾಧ್ಯಾಪಕ ಪ್ರೊ. ಎನ್.ಎಸ್. ಹೂಗಾರ ಮಾತನಾಡಿ, ಯುವ ಸಮುದಾಯಕ್ಕೆ ಮತದಾನದ ಜಾಗೃತೆಯ ಕುರಿತು ಮತ್ತು ಅದರ ಪ್ರಾಮುಖ್ಯತೆ ಬಗ್ಗೆ ವಿವರಿಸಿದರು.
ಆಂಗ್ಲ ಪ್ರಾಧ್ಯಾಪಕ ಪ್ರೊ. ಎನ್.ಎಸ್. ಪಾಟೀಲ್ ಇಂದಿನ ಯುಗದಲ್ಲಿ ನೈತಿಕತೆ ಕುಸಿತದ ಬಗ್ಗೆ ಹೇಳಿದರು. ವಿದ್ಯಾರ್ಥಿ ಸಮುದಾಯಕ್ಕೆ ಜನ ಜಾಗೃತಿಯ ಜತೆಗೆ ಶಾಂತಿ ಸ್ಥಿರತೆ ಅವಶ್ಯಕತೆ ಇದೆ ಎಂದು ಅಭಿಪ್ರಾಯಪಟ್ಟರು. ಲಕ್ಷ್ಮಣ ಹೂಗಾರ ಪ್ರಾರ್ಥಿಸಿದರು. ಅಭಿಲಾಷ ಕೆ. ಸ್ವಾಗತಿಸಿದರು. ಕು. ಉದಯಕುಮಾರ ಅತಿಥಿಗಳ ಪರಿಚಯ ಮಾಡಿದರು. ಸಂಕೇತಸಿಂಗ್ ಕಾರ್ಯಕ್ರಮ ನಿರೂಪಿಸದರು.