ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಟೆಂಪೋ ಡಿಕ್ಕಿ: ಸಾವು

Lingaraj Badiger
Updated On : 9 Apr 2013, 11:28 am

ಕನ್ನಡಪ್ರಭ ವಾರ್ತೆ, ಗುಲ್ಬರ್ಗ, ಏ.8
ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಹಿಂಬದಿ ಸವಾರ ಗಾಯಗೊಂಡ ಘಟನೆ ನೆಲೋಗಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ 218ರ ಬಿಲ್ಲಾಡ ಕ್ರಾಸ್ ಬಳಿ ಶನಿವಾರ ನಡೆದಿದೆ.
ಉಮೇಶ ತಂದೆ ಕರೆಪ್ಪ ವಾರಿ ಎಂಬಾತ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಮ್ರಾನ್ ತಂದೆ ಇಸ್ಮಾಯಿಲ್ ನಾಯಿಕೋಡಿ ತೀವ್ರವಾಗಿ ಗಾಯಗೊಂಡಿದ್ದು, ಆತನನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇಬ್ಬರು ದ್ವಿಚಕ್ರ ವಾಹನದ ಮೇಲೆ ಹೋಗುತ್ತಿದ್ದಾಗ ಎರಡುಗಡೆಯಿಂದ ಬಂದ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ. ಈ ಕುರಿತು ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಕಳವು
ಗುಲ್ಬರ್ಗ: ನಗರದ ಕೇಂದ್ರ ಬಸ್ ನಿಲ್ದಾಣದ ಎದುರುಗಡೆಯ ಮಹಾರಾಜ ಹೋಟಲ್ ಎದುರುಗಡೆ ನಿಲ್ಲಿಸಲಾಗಿದ್ದ ದ್ವಿಚಕ್ರ ವಾಹನ ಕಳ್ಳತನವಾಗಿದೆ.
ನ್ಯೂ ರಾಘವೇಂದ್ರ ಕಾಲೋನಿಯ ನಿವಾಸಿ ಅವಿನಾಶ ತಂದೆ ದಿಬಂಬರರಾವ ಕುಲಕರ್ಣಿ ಎಂಬುವರು ಕಳೆದ 30 ರಂದು ಸಂಜೆ 7ಕ್ಕೆ ಹೋಟಲ್ ಎದುರುಗಡೆ ವಾಹನ ನಿಲ್ಲಿಸಿ ಚಹಾ ಕುಡಿದು ಬರುವಷ್ಟರಲ್ಲಿಯೇ ವಾಹನ ಕಳ್ಳತನವಾಗಿದೆ. ಈ ಕುರಿತು ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement