ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ರಕ್ತದೊತ್ತಡ ನಿಯಂತ್ರಿಸಿ ಆರೋಗ್ಯವಾಗಿರಿ

Rashmi Kasaragodu
Updated On : 10 Apr 2013, 11:05 am

ಯಾದಗಿರಿ: ಅಧಿಕ ರಕ್ತದೊತ್ತಡವು ಹೃದಯಾಘಾತ, ಪಾರ್ಶ್ವವಾಯು, ದೃಷ್ಟಿಹೀನತೆ ಹಾಗೂ ಮೂತ್ರ ಪಿಂಡದ ಕಾಯಿಲೆಗಳಿಗೆ ಕಾರಣವಾಗುತ್ತದೆ. ಈ ಹಿನ್ನೆಲೆಯಲ್ಲಿ ನಿರಂತರವಾಗಿ ರಕ್ತದೊತ್ತಡ ಪರೀಕ್ಷಿಸಿಕೊಂಡು ಅದನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು ಎಂದು ಜಿಲ್ಲಾ ಸರ್ಜನ್ ಡಾ.ಪಿ. ವಿಜಯಕುಮಾರ ಕರೆ ನೀಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿಯಲ್ಲಿ ಮಂಗಳವಾರ ವಿಶ್ವ ಆರೋಗ್ಯ ದಿನಾಚರಣೆ ಕಾರ್ಯಕ್ರಮವನ್ನು ಉದ್ಫಾಟಿಸಿ, ಮಾತನಾಡಿದರು. ಯೋಜನಾರಹಿತ, ಅನಾರೋಗ್ಯಕರ ಜೀವನ ಶೈಲಿ, ಉಪ್ಪಿನಾಂಶ ಅಧಿಕವಿರುವ ಆಹಾರ ಸೇವನೆ, ಮಾನಸಿಕ ಒತ್ತಡ, ಹೊಗೆಸೊಪ್ಪಿನ ಬಳಕೆ ಮತ್ತು ಮದ್ಯ ಸೇವನೆಯಂತಹ ಚಟಗಳಿಂದ ಹಾಗೂ ದೈಹಿಕ ಶ್ರಮ ಕಡಿಮೆ ಇರುವುದರಿಂದ ಹೆಚ್ಚಿನ ಜನರು ಅಧಿಕ ರಕ್ತದೊತ್ತಡಕ್ಕೆ ತುತ್ತಾಗುತ್ತಾರೆ. ಕಾರಣ ರಕ್ತದೊತ್ತಡದ ಸರಿಯಾದ ನಿರ್ವಹಣೆಯಿಂದ ಉತ್ತಮ ಆರೋಗ್ಯ ಪಡೆಯಬಹುದಾಗಿದೆ ಎಂಳಿದರು.
ತಪಾಸಣೆ ಅಗತ್ಯ: ಅಧಿಕ ರಕ್ತದೊತ್ತಡ ತಡೆಗಟ್ಟಬಹುದು ಮತ್ತು ಉಪಚರಿಸಬಹುದಾಗಿದೆ. ಆರೋಗ್ಯವಂತ ಚಟುವಟಿಕೆಗಳಿಗೆ ಪ್ರೋತ್ಸಾಹಿಸುವುದರಿಂದ ಜೀವನದಲ್ಲಿ ಸಂತೋಷ ಹಾಗೂ ಆರೋಗ್ಯವನ್ನು ಪಡೆಯಬಹುದು. ಇತ್ತೀಚಿನ ದಿನಗಳಲ್ಲಿ ಗರ್ಭಿಣಿಯರಲ್ಲಿಯೂ ಈ ರೋಗ ಹೆಚ್ಚಾಗಿದ್ದು, ನಿಯಮಿತ ಆಹಾರ ಸೇವನೆ ಹಾಗೂ ನಿರಂತರ ಆರೋಗ್ಯ ತಪಾಸಣೆಯಿಂದ ಆರೋಗ್ಯವಂತರಾಗಿ ಇರಬಹುದಾಗಿದೆ ಎಂದು ಹೇಳಿದರು.
ಸಮೀಕ್ಷೆ: ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಮಲ್ಲಿಕಾರ್ಜುನ ಮುಕ್ಕಾ, 30 ವರ್ಷ ಆದ ನಂತರ ಪ್ರತಿ ಮೂವರಲ್ಲಿ ಒಬ್ಬರಿಗೆ ರಕ್ತದೊತ್ತಡ ಕಾಯಿಲೆ ಇದೆ.  ಅದರಂತೆ 50 ವರ್ಷಗಳ ನಂತರದ ಪ್ರತಿ ಇಬ್ಬರಲ್ಲಿ ಒಬ್ಬರಿಗೆ ಈ ಕಾಯಿಲೆ ಇರುವ ಬಗ್ಗೆ ಸಮೀಕ್ಷೆಯಿಂದ ತಿಳಿದು ಬಂದಿದೆ. ನಿಯಮಿತ ಆಹಾರ ಸೇವನೆ, ಆರೋಗ್ಯಕರ ಜೀವನ  ಶೈಲಿ, ದುಶ್ಚಟಗಳಿಂದ ದೂರ ಉಳಿಯುವುದರಿಂದ ಈ ಕಾಯಿಲೆಯಿಂದ ಪಾರಾಗಬಹುದು. ಪ್ರತಿ 2-3 ತಿಂಗಳಿಗೊಮ್ಮೆ ರಕ್ತದೊತ್ತಡ ಪರೀಕ್ಷಿಸಿಕೊಂಡು ಉತ್ತಮ ಆರೋಗ್ಯ ಇರುವಂತೆ ನೋಡಿಕೊಳ್ಳಬೇಕು. ಸದೃಢ ಮನಸ್ಸು ಆರೋಗ್ಯಕ್ಕೆ ಸಹಕಾರಿ. ದುರ್ಬಲ ಮನಸ್ಸು ಅನಾರೋಗ್ಯಕ್ಕೆ ದಾರಿ ಮಾಡಿಕೊಡುತ್ತದೆ. ವೈದ್ಯರು ತಮ್ಮ ಆರೋಗ್ಯದ ಜತೆಗೆ ಜನ ಸಾಮಾನ್ಯರ ಆರೋಗ್ಯವನ್ನು ಕಾಪಾಡುವಂತೆ ಸಲಹೆ ನೀಡಿದರು.


Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement