ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಕೈ' ಅಧಿಕಾರಕ್ಕೆ ಬಂದರೆ ಪಾಟೀಲ್‌ಗೆ ಸಚಿವ ಸ್ಥಾನ: ವೀರಯ್ಯ ಸ್ವಾಮಿ

Lingaraj Badiger
Updated On : 13 Apr 2013, 10:57 am

ಕನ್ನಡಪ್ರಭ ವಾರ್ತೆ, ಚಿಂಚೋಳಿ, ಏ.12
ಸೇಡಂ ವಿಧಾನಸಭೆ ಮತಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಅವರು ಹ್ಯಾಟ್ರಿಕ್ ಗೆಲವು ಸಾಧಿಸಿ ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸಚಿವರಾಗಲಿದ್ದಾರೆಂದು ಮಾಜಿ ಶಾಸಕ ಎಂ. ವೀರಯ್ಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಅವರು ತಾಲೂಕಿನ ಸುಲೇಪೇಟ್ ಗ್ರಾಮದಲ್ಲಿ ಸೋಮವಾರ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿ, ಸೇಡಂ ವಿಧಾನಸಭಾ ಮತಕ್ಷೇತ್ರದಲ್ಲಿ ಹಾಲಿ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಸಾಕಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂದರು.
ಕೆಜೆಪಿ, ಬಿಜೆಪಿ, ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳ ಆಮಿಷಕ್ಕೆ ಒಳಗಾಗದೆ ಕಾಂಗ್ರೆಸ್ ಗೆಲವಿಗೆ ಶ್ರಮಿಸಬೇಕೆಂದು ಮನವಿ ಮಾಡಿದರು.
ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಹಾಗೂ ಸೇಡಂ ಶಾಸಕ ಡಾ. ಶರಣಪ್ರಕಾಶ ಪಾಟೀಲ್ ಮಾತನಾಡಿ, ಹಿಂದುಳಿದ ಭಾಗದ ಗ್ರಾಮಗಳ ಅಭಿವೃದ್ಧಿಗಾಗಿ ಸರ್ಕಾರದ ಅನೇಕ ಯೋಜನೆ ಅಡಿಯಲ್ಲಿ ಹಣ ಬಿಡುಗಡೆಗೊಳಿಸಿದ್ದೇನೆ ಎಂದರು.
ಸುಭಾಶ್ಚಂದ್ರ ನಿಷ್ಟಿ, ನಾಗೇಶ್ವರ ಪಾಟೀಲ್, ಭೀಮರಾವ ತೇಗಲತಿಪ್ಪಿ ಮಾತನಾಡಿದರು. ಇದೇ ಸಂದರ್ಭದಲ್ಲಿ ಬೇರೆ ಪಕ್ಷದ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಗೊಂಡರು. ಬಸವರಾಜ ಗಿರಿ ಸ್ವಾಗತಿಸಿದರು. ಅಂಬರೀಶ ಗೋಣಿ ನಿರೂಪಿಸಿದರು. ಕಾಂತಪ್ಪ ಪಡಶೆಟ್ಟಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement