ಲಲಿತಾಗೆ ಪಿಎಚ್.ಡಿ ಪದವಿ ಪ್ರದಾನ
ಗುಲ್ಬರ್ಗ: ನಗರದ ಶ್ರೀ ಶರಣಬಸವೇಶ್ವರ ವಿದ್ಯಾವರ್ಧಕ ಸಂಘದ ಅಪ್ಪ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಟೆಕ್ನಾಲಜಿಯಲ್ಲಿ ವಿದ್ಯುನ್ಮಾನ ಮತ್ತು ಸಂವಹನ ತಂತ್ರಜ್ಞಾನ ವಿಭಾಗದಲ್ಲಿ ಸಹಾಯಕ ಪ್ರಾಧ್ಯಾಪಕರಾಗಿರುವ ಲಲಿತಾ ವೈ.ಎಸ್. ಮಂಡಿಸಿದ ವೈದ್ಯಕೀಯ ಪ್ರತಿಮೆಯ ಸಂಕ್ಷೇಪಿಕರಣದ ತರಂಗಗಳು ಎಂಬ ಸಂಶೋಧನಾ ಮಹಾಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪಿಎಚ್ಡಿ ಪದವಿ ನೀಡಿ ಗೌರವಿಸಿದೆ. ಬೆಂಗಳೂರಿನ ಜೆಎಸ್ಎಸ್ ಅಕಾಡೆಮಿ ಆಫ್ ಟೆಕ್ನಿಕಲ್ ಎಜುಕೇಶನ್ ಸಂಸ್ಥೆಯ ಹಿರಿಯ ಪ್ರಾಧ್ಯಾಪಕ ಡಾ. ಮೃತ್ಯುಂಜಯ ಲಠ್ಠೆ ಮಾರ್ಗದರ್ಶಕರಾಗಿದ್ದರು.