ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ವೈಜನಾಥ ಪಾಟೀಲರನ್ನು ಗೆಲ್ಲಿಸಿ'

Lingaraj Badiger
Updated On : 15 Apr 2013, 11:21 am

ಚಿಂಚೋಳಿ: ಹೈದ್ರಾಬಾದ್ ಕರ್ನಾಟಕ ಹಿಂದುಳಿದ ಪ್ರದೇಶಕ್ಕಾಗಿ ವಿಶೇಷ ಸ್ಥಾನಮಾನ ನೀಡುವಂತೆ ಹಲವು ವರ್ಷಗಳಿಂದ ಹೋರಾಟ ನಡೆಸಿದ ಮತ್ತು ಅಭಿವೃದ್ಧಿಗೋಸ್ಕರ ಚಿಂತಿಸುವ ಸೇಡಂ ಮತಕ್ಷೇತ್ರದ ಕೆಜೆಪಿ ಅಭ್ಯರ್ಥಿ ವೈಜನಾಥ ಪಾಟೀಲರಿಗೆ ಚುನಾವಣೆಯಲ್ಲಿ ಗೆಲ್ಲಿಸಬೇಕೆಂದು ಕೆಜೆಪಿ ಮಹಿಳಾ ಘಟಕದ ರಾಜ್ಯ ಉಪಾಧ್ಯಕ್ಷೆ ಚಿತ್ರನಟಿ ಶ್ರುತಿ ಹೇಳಿದರು.
ಸೇಡಂ ವಿಧಾನಸಭಾ ಮತಕ್ಷೇತ್ರದ ತಾಲೂಕಿನ ನಿಡಗುಂದಾ ಗ್ರಾಮದಲ್ಲಿ ಕೆಜೆಪಿ ಅಭ್ಯರ್ಥಿ ವೈಜನಾಥ ಪಾಟೀಲರ ಪರವಾಗಿ ಪ್ರಚಾರ ನಡೆಸಿ, ಈ ಹಿಂದೆ ಬಿ.ಎಸ್. ಯಡಿಯೂರಪ್ಪ ಅವರು ರೈತರ ಹೆಸರಿನ ಮೇಲೆ ಪ್ರಮಾಣ ವಚನ ಸ್ವೀಕರಿಸಿ ರೈತರ ಸಾಲ ಮನ್ನಾ ಮಾಡಿದ್ದಾರೆ. ಹಾಲಿನ ದರ # 2 ಹೆಚ್ಚಳ, ಭಾಗ್ಯಲಕ್ಷ್ಮೀ ಯೋಜನೆ, ಮಧ್ಯಾಹ್ನ ಬಿಸಿಯೂಟ ಯೋಜನೆ ಇನ್ನು ಅನೇಕ ಜನಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ರಾಜ್ಯದ ಅಭಿವೃದ್ಧಿಗೋಸ್ಕರ ಶ್ರಮಿಸಿದ್ದಾರೆ ಎಂದರು.
ಈ ಭಾಗದವರು ಕೇಂದ್ರ ಸಚಿವರಾಗಿದ್ದರೂ, ಇನ್ನು ರಸ್ತೆಗಳ ಸುಧಾರಣೆಯಾಗಿಲ್ಲ, ಜಿಲ್ಲೆಯಲ್ಲಿ ರಸ್ತೆಗಳ ಸ್ಥಿತಿಗತಿ ನೋಡಿದರೆ ಇನ್ನು ಹೈ.ಕ ಪ್ರದೇಶ ತೀರಾ ಹಿಂದುಳಿಯಲು ಇಲ್ಲಿನ ಜನಪ್ರತಿನಿಧಿಗಳೇ ಕಾರಣರಾಗಿದ್ದಾರೆ ಎಂದು ಆರೋಪಿಸಿದರು.
ಕೆಜೆಪಿ ಅಭ್ಯರ್ಥಿ ವೈಜನಾಥ ಪಾಟೀಲ್, ಬಾಬುರಾವ ಪಾಟೀಲ್, ತಿಪ್ಪಣಪ್ಪ ಕಮಕನೂರ, ಶರಣು ಮೋತಕಪಳ್ಳಿ, ಗೌತಮ ಪಾಟೀಲ್, ಜಗದೀಶ ಹಿರೇಮನಿ, ಜಗದೀಶ ಪಾಟೀಲ್ ಶಿರೋಳ್ಳಿ, ಬಸವರಾಜ ಸುಲೇಪೇಟ್ ಭಾಗವಹಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement