ಡಾ. ಪಾಟೀಲ್, ತೇಲ್ಕೂರ, ಖಾನ್ ನಾಮಪತ್ರ ಸಲ್ಲಿಕೆ
ಸೇಡಂ: ಸೇಡಂ ಮತಕ್ಷೇತ್ರದಿಂದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ಕಾಂಗ್ರೆಸ್‌ನಿಂದ ಹಾಲಿ ಶಾಸಕ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ್, ಬಿಜೆಪಿಯಿಂದ ರಾಜಕುಮಾರ ವೀರಶೆಟ್ಟಪ್ಪ ಪಾಟೀಲ್ ತೇಲ್ಕೂರ, ಜೆಡಿಎಸ್‌ನಿಂದ ಮುಕ್ರಂಖಾನ್ ಹಾಗೂ ಪಕ್ಷೇತರರಾಗಿ ವೆಂಕಟೇಶ ಸಹಾಯಕ ಆಯುಕ್ತರಿಗೆ ನಾಮಪತ್ರ ಸಲ್ಲಿಸಿದರು. ಬೆಳಗ್ಗೆ 11ಕ್ಕೆ ಕೊತ್ತಲ ಬಸವೇಶ್ವರ ದೇವಾಲಯದಿಂದ ಸಾವಿರಾರು ಕಾರ್ಯಕರ್ತರೊಂದಿಗೆ ಆಗಮಿಸಿದ ಅಭ್ಯರ್ಥಿಗಳು ಬೃಹತ್ ಮೆರವಣಿಗೆ ನಡೆಸಿದರು.
ಸ್ವತಂತ್ರ 'ಹರ್ಷ'
ಆಳಂದ: ಶಾಸಕ ಸುಭಾಷ ಗುತ್ತೇದಾರ ಅವರ ಕಿರಿಯ ಪುತ್ರ ಹಾಗೂ ಜಿಲ್ಲಾ ಪಂಚಾಯಿತಿ ಸದಸ್ಯ ಹರ್ಷಾನಂದ ಎಸ್. ಗುತ್ತೇದಾರ ಅವರು ಮೇ 5ರಂದು ನಡೆಯಲಿರುವ ವಿಧಾನಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಸೋಮವಾರ ಚುನಾವಣಾಧಿಕಾರಿಗಳಿಗೆ ನಾಮಪತ್ರ ಸಲ್ಲಿಸಿದರು. ಕೆಜೆಪಿ, ಜೆಡಿಎಸ್, ಬಿಜೆಪಿ ಮತ್ತು ಪಕ್ಷೇತರ ಅಭ್ಯರ್ಥಿ ಸೇರಿ ಒಟ್ಟು ನಾಲ್ವರು ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ ಎಂದು ಚುನಾವಣಾಧಿಕಾರಿ ಡಾ. ಬಿ. ರಾಜಣ್ಣ ತಿಳಿಸಿದ್ದಾರೆ.