ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಬಿ ಫಾರ್ಮ್ ಸಿಕ್ಕಿದೆ'

Lingaraj Badiger
Updated On : 17 Apr 2013, 11:57 am

ಯಾದಗಿರಿ: ಬಿ ಫಾರ್ಮ್ ಹಂಚಿಕೆಯಲ್ಲಿ ಯಾವುದೇ ರೀತಿ ಗೊಂದಲವಿಲ್ಲ. ನಾನು ಪಕ್ಷದ ಅಧಿಕೃತ ಅಭ್ಯರ್ಥಿಯಾಗಿದ್ದೇನೆ ಎಂದು ಯಾದಗಿರಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಚಂದ್ರಶೇಖರಗೌಡ ಮಾಗನೂರ ಹೇಳಿದರು.
  ಇಲ್ಲಿಯ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಪಕ್ಷದ ಹೈಕಮಾಂಡ್ ನನಗೆ ಬಿ ಫಾರ್ಮ್ ನೀಡಿದೆ. ಆದರೆ ಕೆಲವರು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಬಿಜೆಪಿ ಅಭ್ಯರ್ಥಿಗಳಾಗಿ ಮಂಗಳವಾರ ನಾಮಪತ್ರ ಸಲ್ಲಿಸಿರುವ ಡಾ. ವೆಂಕಟೇಶ ಗಡ್ಡಿಮನಿ, ದೇವರಾಜ ನಾಯಕ ಮತ್ತು ಸಿದ್ರಾಮರಡ್ಡಿ ಬಲಕಲ್ ಅವರು ಸಹೋದರರಿದ್ದಂತೆ. ಅವರು ನಾಮಪತ್ರ ವಾಪಸ್ ಪಡೆದುಕೊಂಡು ನನ್ನೊಂದಿಗೆ ಪ್ರಚಾರಕ್ಕೆ ಆಗಮಿಸುತ್ತಾರೆಂಬ ವಿಶ್ವಾಸವಿದೆ.
  ಜಿಲ್ಲಾ ಬಿಜೆಪಿ ಬೆಳವಣಿಗೆ ಕುರಿತಂತೆ ಹೈಕಮಾಂಡ್ ಮಾಹಿತಿ ಪಡೆದುಕೊಂಡು ಅವರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲಿದ್ದಾರೆ. ಅದಕ್ಕಾಗಿ ಮತದಾರರು ಮತ್ತು ಕಾರ್ಯಕರ್ತರು ಗೊಂದಲಕ್ಕೀಡಾಗಬಾರದು. ಚಟ್ನಳ್ಳಿ, ಬಲಕಲ್, ಕೊಳ್ಳೂರು, ನಾಯ್ಕಲ್, ಕಾಡಂಗೇರಾ, ಹಂಚಿನಾಳ ಸೇರಿದಂತೆ ಇನ್ನಿತರ ಗ್ರಾಮಗಳಲ್ಲಿ ಚುನಾವಣೆ ಪ್ರಚಾರ ನಡೆಸಿದ್ದೇನೆ. ಈ ವೇಳೆ ಮತದಾರರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಬಹುತೇಕ ಎಲ್ಲ ಹಳ್ಳಿಗಳಿಗೆ ಹಾಲಿ ಶಾಸಕ ಡಾ. ಎ.ಬಿ. ಮಾಲಕರಡ್ಡಿ ಹೋಗಿಯೇ ಇಲ್ಲ ಎಂಬ ಸಂಶಯ ಕಾಡುತ್ತಿದೆ. ಕೆಲವೊಂದು ಹಳ್ಳಿಗಳಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಈ ಬಗ್ಗೆ ಜನ ಆರೋಪಿಸುತ್ತಿದ್ದಾರೆ. ಇದರಿಂದಾಗಿ ಜನತೆ ಬದಲಾವಣೆ ಬಯಸಿದ್ದಾರೆ ದೇವೇಂದ್ರನಾಥ ನಾದ, ನಿಂಗಣ್ಣ ಸಾಹುಕಾರ, ಮಹೇಂದ್ರಕುಮಾರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement