ದರ್ಶನಾಪುರ ವಿರುದ್ಧ ಪ್ರಕರಣ ದಾಖಲು
ಯಾದಗಿರಿ: ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆರೋಪದಲ್ಲಿ ಶಹಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ತಿಳಿಸಿದ್ದಾರೆ.
ಕಳೆದ ಏ.15ರಂದು ಕಾಂಗ್ರೆಸ್ ಅಭ್ಯರ್ಥಿಯಾದ ಶರಣಬಸಪ್ಪ ದರ್ಶನಾಪುರ, ಬೆಂಬಲಿಗರು ಹಾಗೂ ಕಾರ್ಯಕರ್ತರು ನಾಮಪತ್ರ ಸಲ್ಲಿಸುವ ವೇಳೆ ಚುನಾವಣಾಧಿಕಾರಿ ಕಚೇರಿ ಆವರಣದಲ್ಲಿ ನೂರು ಮೀಟರ್ ಒಳಗೆ ನುಗ್ಗಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆ ಎಂದು ಶಹಾಪುರ ಚುನಾವಣಾಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು.
ಇದಕ್ಕೆ ಸ್ಪಂದಿಸಿ ಶಹಾಪುರ ಆರಕ್ಷಕ ಉಪನಿರೀಕ್ಷಕರು ಐಪಿಸಿ ಕಲಂ 143, 147, 188 ಹಾಗೂ 149ರನ್ವಯ ಶರಣಬಸಪ್ಪ ದರ್ಶನಾಪುರ ಹಾಗೂ ಇತರೆ ಕಾರ್ಯಕರ್ತರ ಮೇಲೆ ಎಫ್ಐಆರ್ ದಾಖಲಿಸಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.