ಶಿವಶರಣಪ್ಪ ಜಾಪಟ್ಟಿ ಕಾಂಗ್ರೆಸ್ ಸೇರ್ಪಡೆ
ಚಿಂಚೋಳಿ: ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಮತ್ತು ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಿ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಡಾ. ಉಮೇಶ ಜಾಧವ ಅವರಿಗೆ ಬೆಂಬಲ ನೀಡಲಾಗುತ್ತಿದೆ ಎಂದು ನ್ಯಾಯವಾದಿ ಶಿವಶರಣಪ್ಪ ಜಾಪಟ್ಟಿ ತಿಳಿಸಿದ್ದಾರೆ. ಜಿಲ್ಲಾ ಜೆಡಿಎಸ್ ಪಕ್ಷದ ಜಿಲ್ಲಾ ಉಪಾಧ್ಯಕ್ಷ ಸ್ಥಾನಕ್ಕೆ ಮತ್ತು ಪ್ರಾಥಮಿಕ ಸ್ಥಾನಕ್ಕೆ ವೈಯಕ್ತಿಕ ಕಾರಣಗಳಿಂದಾಗಿ ರಾಜಿನಾಮೆ ನೀಡಿದ್ದು, ರಾಜಿನಾಮೆ ಪತ್ರವನ್ನು ಜಿಲ್ಲಾಧ್ಯಕ್ಷರಿಗೆ ನೀಡಲಾಗಿದೆ ಎಂದು ಜಾಪಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಮುತ್ತಂಗಿ ರಾಜಿನಾಮೆ
ಚಿಂಚೋಳಿ: ತಾಲೂಕು ಬಿಎಸ್ಆರ್ ಕಾಂಗ್ರೆಸ್ ಪಕ್ಷದ ಚಿಂಚೋಳಿ ಮತಕ್ಷೇತ್ರದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ಸಲ್ಲಿಸಲಾಗಿದೆ ಎಂದು ರವಿಶಂಕರ ರೆಡ್ಡಿ ಮುತ್ತಂಗಿ ತಿಳಿಸಿದ್ದಾರೆ. ಚಿಂಚೋಳಿ ಮೀಸಲು ವಿಧಾನಸಭಾ ಮತಕ್ಷೇತ್ರಕ್ಕೆ ಕಳೆದ 8 ತಿಂಗಳ ಹಿಂದೆ ತಾಲೂಕು ಅಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷ ಶ್ರೀರಾಮುಲು ನೇಮಕಗೊಳಿಸಿದರು. ಆದರೆ ಪಕ್ಷದ ಕೆಲವು ಮುಖಂಡರ ವರ್ತನೆಯಿಂದಾಗಿ ತಮ್ಮ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಿರುವುದಾಗಿ ರವಿಶಂಕರರೆಡ್ಡಿ ತಿಳಿಸಿದ್ದಾರೆ.