6 ಅಭ್ಯರ್ಥಿಗಳು ಕಣದಿಂದ ಹಿಂದಕ್ಕೆ
ಯಾದಗಿರಿ: ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆಯಲ್ಲಿ ಸ್ಪರ್ಧಿಸಲು ಉಮೇದುವಾರಿಕೆ ಸಲ್ಲಿಸಿದ್ದವರ ಪೈಕಿ 6 ಅಭ್ಯರ್ಥಿಗಳು ಶನಿವಾರ ನಾಮಪತ್ರ ವಾಪಸ್ ಪಡೆದಿದ್ದಾರೆ. ಯಾದಗಿರಿ ಕ್ಷೇತ್ರದ ಶೇಖ್ ಜಹಿಯುದ್ದೀನ್, ಗುರುಮಠಕಲ್ ಕ್ಷೇತ್ರದಲ್ಲಿ ಶರಣಗೌಡ ಕಂದಕೂರ, ಶರಣಪ್ಪ ಗೌಡಗೇರಾ, ಅಮರೇಶ ರಾಠೋಡ, ಶಹಾಪುರ ಕ್ಷೇತ್ರದಿಂದ ಮಲ್ಲಿಕಾರ್ಜುನ ಚಿಲ್ಲಾಳ, ಮಹಾದೇವ ದಿಗ್ಗಿ ನಾಮಪತ್ರ ವಾಪಸ್ ಪಡೆದು ಚುನಾವಣಾ ಅಖಾಡದಿಂದ ಹಿಂದಕ್ಕೆ ಸರಿದಿದ್ದಾರೆ.