ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

'ಸಿದ್ದರಾಮಯ್ಯರಿಂದ ಕುರುಬ ಸಮಾಜಕ್ಕೆ ಸ್ಥಾನಮಾನ'

Lingaraj Badiger
Updated On : 22 Apr 2013, 11:35 am

ಚಿಂಚೋಳಿ: ರಾಜ್ಯದಲ್ಲಿ ಕುರುಬ ಸಮಾಜಕ್ಕೆ ಸೂಕ್ತ ಸ್ಥಾನಮಾನ ಮತ್ತು ಪ್ರಾತಿನಿಧ್ಯತೆ ಸಿಕ್ಕಿದ್ದು, ಕೇವಲ ಕಾಂಗ್ರೆಸ್‌ನ ಜನಪ್ರಿಯ ನಾಯಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದ ಮಾತ್ರ ಎಂದು ತಾಲೂಕು ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಸಿದ್ದಪ್ಪ ಪೂಜಾರಿ ಹೇಳಿದರು.
ತಾಲೂಕು ಕುರುಬ ಸಮಾಜ ಅಧ್ಯಕ್ಷ ಮಲಕಪ್ಪ ಬಿರಾಪುರ ಅವರ ಅಧ್ಯಕ್ಷತೆಯಲ್ಲಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ನಡೆದ ತಾಲೂಕು ಕುರುಬ ಸಮಾಜದ ಕಾಂಗ್ರೆಸ್ ಮುಖಂಡರ ಸಭೆಯಲ್ಲಿ ಮಾತನಾಡಿದರು.
ಕುರುಬ ಸಮಾಜಕ್ಕೆ ಸರ್ಕಾರದಿಂದ ಅನೇಕ ಸವಲತ್ತುಗಳು ಮತ್ತು ಸಾಮಾಜಿಕ ನ್ಯಾಯ ಸಿಕ್ಕಿದೆ ಎಂದ ಅವರು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಂದ ಕುರುಬ ಸಮಾಜಕ್ಕೆ ಶೈಕ್ಷಣಿಕ, ಆರ್ಥಿಕ, ರಾಜಕೀಯ ಕ್ಷೇತ್ರಗಳಲ್ಲಿ ಹೆಚ್ಚಿನ ಸೌಲಭ್ಯಗಳು ದೊರಕಿವೆ ಹೀಗಾಗಿ ನಮ್ಮ ಪಕ್ಷದ ಅಭ್ಯರ್ಥಿ ಡಾ. ಉಮೇಶ ಜಾಧವ ಅವರನ್ನು ಬೆಂಬಲಿಸಬೇಕು ಎಂದು ಮನವಿ ಮಾಡಿದರು. ಕಾಂಗ್ರೆಸ್ ಮುಖಂಡರಾದ ರೇವಣಸಿದ್ದಪ್ಪ ಅಣಕಲ್, ಹಣಮಂತ ಪೂಜಾರಿ, ಸೂರ್ಯಕಾಂತ ಪೂಜಾರಿ ಮಾತನಾಡಿ, ಕಾಂಗ್ರೆಸ್ ಅಭ್ಯರ್ಥಿಯ ಗೆಲವಿಗೆ ಶ್ರಮಿಸಬೇಕು ಎಂದು ಕೋರಿದರು. ತಾಲೂಕು ಕುರುಬ ಸಮಾಜಜ ಅಧ್ಯಕ್ಷ ಮಲಕಪ್ಪ ಬಿರಾಪುರ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಮಲ್ಲಿಕಾರ್ಜುನ ಸಕ್ರಿ, ರವಿ ಪೂಜಾರಿ, ಶಾಮರಾವ್ ಪೂಜಾರಿ ಮೋಘಾ, ರಾಜೇಂದ್ರ ಕನಕಪುರ ಇದ್ದರು. ರೇವಣಸಿದ್ದಪ್ಪ ಅಣಕಲ್ ಸ್ವಾಗತಿಸಿದರು. ಹಣಮಂತಪ್ಪ ಪೂಜಾರಿ ವಂದಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement