ಕಾಂಗ್ರೆಸ್ ಗೆಲವು ಖಚಿತ: ನೀರಡಗಿ ವಿಶ್ವಾಸ
ಸುರಪುರ: ಕ್ಷೇತ್ರದಲ್ಲಿ ಈ ಬಾರಿ ಕಾಂಗ್ರೆಸ್ ಅಲೆ ಇದೆ. ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪನಾಯಕರು ಈ ಹಿಂದೆ ಶಾಸಕರಾಗಿ ತಾಲೂಕಿನ ಅಭಿವೃದ್ಧಿಗೆ ಶ್ರಮಿಸಿದ್ದಾರೆ. ಅವರ ಅಭಿವೃದ್ಧಿ ಕಾರ್ಯಗಳೇ ಅವರ ಗೆಲವಿಗೆ ಶ್ರೀರಕ್ಷೆಯಾಗಲಿದೆ ಎಂದು ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅಚ್ಚಪ್ಪ ನೀರಡಗಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವೆಂಕಟಪ್ಪ ನಾಯಕರು ತಮ್ಮ ಅಧಿಕಾರವಧಿಯಲ್ಲಿ ಹಿಂದುಳಿದ ಮತ್ತು ದೀನ ದಲಿತರ ಅಭಿವೃದ್ಧಿಗಾಗಿ ಸಾಕಷ್ಟು ಶ್ರಮಿಸಿದ್ದಾರೆ. ರೈತ ಪರ ನಿಲುವುಳ್ಳ ಅವರಿಗೆ ಗೆಲವು ಈ ಬಾರಿ ಖಚಿತ ಎಂದು ನೀರಡಗಿ ತಿಳಿಸಿದ್ದಾರೆ.