ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಕೆಜೆಪಿ ಲಿಂಗಾಯತ ಜಾತಿಗೆ ಸೀಮಿತವಲ್ಲ: ಮುಡಬಿ

Rashmi Kasaragodu
Updated On : 26 Apr 2013, 11:11 am

ಕನ್ನಡಪ್ರಭ ವಾರ್ತೆ    ಗುಲ್ಬರ್ಗ    ಏ.25
ಕೆಜೆಪಿ ಕೇವಲ ಲಿಂಗಾಯತ ಜಾತಿಗೆ ಸೀಮಿತವಾಗಿಲ್ಲ. ಅದು ಸರ್ವ ಜಾತಿ, ಜನಾಂಗದ ಪಕ್ಷವಾಗಿದ್ದು, ಈ ವಿಧಾನಸಭಾ ಚುನಾವಣೆಯಲ್ಲಿ ಬಹುಮತದಿಂದ ಅಧಿಕಾರಕ್ಕೆ ಬರಲಿದೆ ಎಂದು ಪಕ್ಷದ ರಾಜ್ಯ ಉಪಾಧ್ಯಕ್ಷ ಬಾಬುರಾವ ಮುಡಬಿ ಹೇಳಿದರು.
ಅವರು ಗುರುವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪಕ್ಷದ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಲಿಂಗಾಯತ ರಾಜಕಾರಣ ಮಾಡುತ್ತಿದ್ದಾರೆ ಎಂಬ ಆರೋಪ ಸುಳ್ಳು ಎಂದರು.
ದಲಿತ ವರ್ಗದ ತಮಗೆ ರಾಜ್ಯ ಉಪಾಧ್ಯಕ್ಷ ಸ್ಥಾನ ನೀಡುವುದರೊಂದಿಗೆ ಒಟ್ಟು 36 ವಿಧಾನಸಭಾ ಕ್ಷೇತ್ರಗಳಲ್ಲಿ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳಿಗೆ ಮತ್ತು ಇತರ ಕ್ಷೇತ್ರಗಳಲ್ಲಿ ಎಲ್ಲ ಜಾತಿ ವರ್ಗದ ಮುಖಂಡರಿಗೆ ಚುನಾವಣಾ ಕಣಕ್ಕಿಳಿಸಿ ಸಾಮಾಜಿಕ ನ್ಯಾಯ ಕಲ್ಪಿಸಿಕೊಟ್ಟಿದ್ದಾರೆ ಎಂದರು.
ಸುದ್ದಿಗೋಷ್ಠಿಯಲ್ಲಿ ಪಕ್ಷದ ರಾಜ್ಯ ಕಾರ್ಯದರ್ಶಿ ತಿಪ್ಪಣಪ್ಪ ಕಮಕನೂರ, ಮಹಾನಗರ ಜಿಲ್ಲಾಧ್ಯಕ್ಷ ಬಸವರಾಜ ಇಂಗಿನ, ಮುಖಂಡರಾದ ಎಸ್.ಜಿ. ಭಾರತಿ, ವೈಜನಾಥ ಝಳಕಿ, ಬಸವರಾಜ ಶಿವಗೋಳ ಇತರರು ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement