ಮತದಾನ ಜಾಗೃತಿ ಮೂಡಿಸಲು ಬೈಕ್ ರ್ಯಾಲಿ
ಯಾದಗಿರಿ: ಮತದಾನದ ಮಹತ್ವ ಸಾರಲು ಶುಕ್ರವಾರ ಹಮ್ಮಿಕೊಂಡಿದ್ದ ಬೈಕ್ ರ್ಯಾಲಿಯಲ್ಲಿ ಜಿಲ್ಲಾಧಿಕಾರಿ ಪಿ.ರಾಜೇಂದ್ರ ಚೋಳನ್ ಅವರು ಸ್ವತಃ ಬೈಕ್ ಚಲಾಯಿಸುವ ಮೂಲಕ ರ್ಯಾಲಿಗೆ ಚಾಲನೆ ನೀಡಿದರು.
ಜಿಪಂ ಸಿಇಒ ಎಸ್.ಎ. ಜಿಲಾನಿ ಹಸಿರು ನಿಶಾನೆ ತೋರಿದರು. ಮತದಾನದ ಮಹತ್ವ ಬಗ್ಗೆ ಜಾಗೃತಿ ಮೂಡಿಸಲು ನಗರದಲ್ಲಿ ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಗಿತ್ತು. ನೂರಾರು ಜನರು ಭಿತ್ತಿ ಪತ್ರಗಳನ್ನು ಪ್ರದರ್ಶಿಸುತ್ತ ನಗರ ಪ್ರದಕ್ಷಿಣೆ ಹಾಕಿದರು.
ಜಿಲ್ಲಾಧಿಕಾರಿಗಳ ಕಚೇರಿ ಆವರಣದಿಂದ ಆರಂಭವಾದ ರ್ಯಾಲಿ ನಗರದ ಬಸ್ ನಿಲ್ದಾಣ, ರೇಲ್ವೆ ನಿಲ್ದಾಣ, ಅಂಬೇಡ್ಕರ್ ಭವನ, ಗಂಜ್ ಸರ್ಕಲ್, ಮೈಲಾಪುರ ಬೇಸ್ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಗಾಂಧಿ ಚೌಕ್‌ಗೆ ಆಗಮಿಸಿತು. ನಂತರ ಗಾಂಧಿಚೌಕದಲ್ಲಿ ಮತದಾನ ಮಹತ್ವದ ಜಾಗೃತಿಗಾಗಿ ರಂಗೋಲಿ ಸ್ಪರ್ಧೆ ಏರ್ಪಡಿಸಲಾಗಿತ್ತು. ಜಿಪಂ ಸಿಇಒ ರಂಗೋಲಿ ಸ್ಪರ್ಧೆಗೆ ಚಾಲನೆ ನೀಡಿದರು.