ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ
ಸುರಪುರ: ಕಾಂಗ್ರೆಸ್ ಅಭ್ಯರ್ಥಿ ರಾಜಾ ವೆಂಕಟಪ್ಪ ನಾಯಕ ಪರ ಕಾರ್ಯಕರ್ತರು ಇಲ್ಲಿಯ ಝಂಡದಕೇರಾ ಹಾಗೂ ಇತರೆ ಬಡಾವಣೆಯಲ್ಲಿ ಪಾದಯಾತ್ರೆ ಮೂಲಕ ಬಿರುಸಿನ ಮತಯಾಚನೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ರಾಜಾ ರಂಗಪ್ಪನಾಯಕರ ಪುತ್ರ ರೂಪಕುಮಾರ ನಾಯಕ ಮಾತನಾಡಿ. ತಾಲೂಕಿನಲ್ಲಿ ಈ ಬಾರಿ ಕಾಂಗ್ರೆಸ್ ಅಲೆ ಹೆಚ್ಚಾಗಿದೆ. ಮಾಜಿ ಶಾಸಕರ ಆಡಳಿತದಿಂದ ಜನ ಬೇಸತ್ತು ನಿತ್ಯವೂ ಪಕ್ಷಕ್ಕೆ ಸೇರುವವರ ಸಂಖ್ಯೆ ಹೆಚ್ಚಾಗಿದೆ. ಇದು ಕಾರ್ಯಕರ್ತರ ಉತ್ಸಾಹ, ಹುರುಪು ಇಮ್ಮಡಿಗೊಳಿಸುತ್ತಿದೆ. ಹೀಗಾಗಿ ಕಾಂಗ್ರೆಸ್ ಅಭ್ಯರ್ಥಿ ಗೆಲ್ಲುವ ಎಲ್ಲ ಸ್ಪಷ್ಟ ಲಕ್ಷಣ ಗೋಚರಿಸುತ್ತಿದೆ ಎಂದು ವಿಶ್ವಾಸ ವ್ಯಕ್ತ ಪಡಿಸಿದರು.