ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಪ್ರಕರಣ
ಗುಲ್ಬರ್ಗ: ಜೇವರ್ಗಿ ತಾಲೂಕಿನ ಮಂದೇವಾಲದಲ್ಲಿ ನಡೆದ ಕಾಂಗ್ರೆಸ್ ಅಭ್ಯರ್ಥಿ ಡಾ. ಅಜಯಸಿಂಗ್ ಪರ ಪ್ರಚಾರ ಸಭೆಯ ನಂತರ ಸಾರ್ವಜನಿಕರಿಗೆ ಊಟದ ವ್ಯವಸ್ಥೆ ಮಾಡಿರುವ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವ ಕುರಿತು ದೂರು ದಾಖಲಾಗಿದೆ. ಪಕ್ಷದ ಅಭ್ಯರ್ಥಿ ಡಾ. ಅಜಯಸಿಂಗ್ ಮತ್ತು ಊಟ ಸಿದ್ಧಗೊಳಿಸಿದ ಢಾಬಾದ ಮಾಲೀಕ ಮಹಿಬೂಬಸಾಬ್ ಅವರ ವಿರುದ್ಧ ನೆಲೋಗಿ ಹೋಬಳಿಯ ಚುನಾವಣಾಧಿಕಾರಿ ನೆಲೋಗಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.