ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಬಿಜೆಪಿ ಅಭ್ಯರ್ಥಿ ಮತಯಾಚನೆ

Mainashree
Updated On : 28 Apr 2013, 11:31 am

ಗುಲ್ಬರ್ಗ: ಗುಲ್ಬರ್ಗ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಾಜಗೋಪಾಲ ರೆಡ್ಡಿ ಕ್ಷೇತ್ರದ ವಿವಿಧ ಬಡಾವಣೆಗಳಿಗೆ ಪಾದಯಾತ್ರೆ ನಡೆಸಿ ಬಿರುಸಿನ ಮತಯಾಚನೆ ಮಾಡುತ್ತಿದ್ದಾರೆ.
ಶಹಾಬಜಾರ್, ವಿಶ್ವರಾಧ್ಯ ಕಾಲೋನಿ, ಆಳಂದ ನಾಕಾ, ಲಾಲಗೇರಿ, ಲಂಗಾರ ಹನುಮಾನ ಕಾಲೋನಿ, ಖಾಕಡೆ ಚೌಕ್ ಸೇರಿದಂತೆ ವಿವಿಧ ಬಡಾವಣೆಗಳಲ್ಲಿ ಪಾದಯಾತ್ರೆ ನಡೆಸಿ ಮತಯಾಚನೆ ಮಾಡಿದರು.
ರೆಡ್ಡಿ ಅವರು ಬಿಜೆಪಿ ಹಲವಾರು ಮುಖಂಡರು ಹಾಗೂ ನೂರಾರು ಕಾರ್ಯಕರ್ತರೊಂದಿಗೆ ಕ್ಷೇತ್ರದ ಹಲವಾರು ಬಡಾವಣೆಗಳ ಮನೆಗಳಿಗೆ ತೆರಳಿ ಬಿಜೆಪಿ ಸರ್ಕಾರ ಐದು ವರ್ಷದಲ್ಲಿ ಕೈಗೊಂಡು ಜನಪರ ಯೋಜನೆ ಹಾಗೂ ಸಾಧನೆ ಕುರಿತು ಮನವರಿಕೆ ಮಾಡಿಕೊಟ್ಟು ತಮಗೆ ಮತ ನೀಡುವಂತೆ ಮನವಿ ಮಾಡಿದರು.
ಈ ಹಿಂದೆ ಪಾಲಿಕೆ ಸದಸ್ಯರಾಗಿ ಬಡಾವಣೆಗೆ ಅಗತ್ಯ ಮೂಲ ಸೌಲಭ್ಯ ಕಲ್ಪಿಸಿ ಕೊಟ್ಟಿರುವೆ. ಈ ಸಲ ಕ್ಷೇತ್ರದಿಂದ ಆರಿಸಿ ಕಳಿಸಿದರೆ ಕ್ಷೇತ್ರವನ್ನು ಅಭಿವೃದ್ಧಿಗೊಳಿಸಿ ಜಿಲ್ಲೆಯಲ್ಲೇ ಮಾದರಿ ಕ್ಷೇತ್ರವನ್ನಾಗಿ ಮಾಡುವುದಾಗಿ ಹೇಳಿದರು. ಈ ವೇಳೆ ಶಿವಾನಂದ ಬಂಡಕ, ಸಾಹೇಬಗೌಡ ಪಾಟೀಲ್, ಅಂಬಾದಾಸ, ನಾಗರಾಜ ವಾಡದ್, ಸಂಗಮೇಶ ಹುಡಗಿ, ಕ್ಷೇಮಜಿ  ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement