ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಅಧಿಕಾರವೇ ಮುಖ್ಯ

Vishwanath S
Updated On : 1 May 2013, 12:13 pm

ಜೇವರ್ಗಿ: ಕಳೆದ ನಾಲ್ಕು ದಶಕಗಳಲ್ಲಿ ಕಾಂಗ್ರೆಸ್ ಸರ್ಕಾರ ಮಾಡದಂಥ ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಸರ್ಕಾರ 5 ವರ್ಷಗಳಲ್ಲಿ ಮಾಡಿದೆ. ಕಾಂಗ್ರೆಸ್ಸಿಗರಿಗೆ ರಾಜ್ಯದ ಅಭಿವೃದ್ಧಿಗಿಂತ ಅಧಿಕಾರ ಮುಖ್ಯವಾಗಿದೆ ಎಂದು ಉಪಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಆರೋಪಿಸಿದರು.
ಅವರು ಮಂಗಳವಾರ ತಾಲೂಕಿನ ಕೂಡಿ ದರ್ಗಾ ಹತ್ತಿರ ಬಿಜೆಪಿ ಅಭ್ಯರ್ಥಿ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಅವರ ಪರ ಚುನಾವಣಾ ಪ್ರಚಾರ ಭಾಷಣ ಮಾಡಿದರು.
ಕಾಂಗ್ರೆಸ್ ಅಮ್ಮ - ಮಕ್ಕಳ ಪಕ್ಷ. ಕಾಂಗ್ರೆಸ್‌ನವರ ವಂಶಾಡಳಿತಕ್ಕೆ ಜನರು ಬೇಸತ್ತಿದ್ದಾರೆ. ಸತತವಾಗಿ 36 ವರ್ಷಗಳಿಂದ ಈ ಭಾಗದಿಂದ ಚುನಾಯಿತರಾಗಿ ಶಾಸಕರಾಗಿ, ಸಚಿವರಾಗಿ, ಮುಖ್ಯಮಂತ್ರಿಯಾದವರು ಮಾಡ ಅಭಿವೃದ್ಧಿಯನ್ನು ಬಿಜೆಪಿ ಸರ್ಕಾರ ಕೇವಲ 5 ವರ್ಷದಲ್ಲಿ ಮಾಡಿದೆ ಎಂದು ಪರೋಕ್ಷವಾಗಿ ಮಲ್ಲಿಕಾರ್ಜುನ ಖರ್ಗೆ ಮತ್ತು ಧರ್ಮಸಿಂಗ್ ಅವರನ್ನು ಟೀಕಿಸಿದರು.
ವರುಣ ಕ್ಷೇತ್ರದಲ್ಲಿ ಸಿದ್ಧರಾಮಯ್ಯ ಅವರನ್ನು ಸೋಲಿಸಲು ದಲಿತರು ಹವಣಿಸುತ್ತಿದ್ದರೆ, ಕೊರಟಗೆರೆಯಲ್ಲಿ ಡಾ. ಜಿ.ಪರಮೇಶ್ವರ ಅವರನ್ನು ಸೋಲಿಸಲು ಕುರುಬ ಸಮಾಜದವರು ಪ್ರಯತ್ನಿಸುತ್ತಿದ್ದಾರೆ. ಕಾರಣ ಕಾಂಗ್ರೆಸ್ ಪಕ್ಷ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸದೆ ಇರುವುದರಿಂದ ಅಲ್ಲಿಯ ಮುಖಂಡರು ಒಬ್ಬರಿಗೊಬ್ಬರು ಸೋಲಿಸಲು ಪ್ರಯತ್ನಿಸುತ್ತಿದ್ದಾರೆ ಎಂದರು. ಬಿಜೆಪಿ ಅಭ್ಯರ್ಥಿ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ ಮಾತನಾಡಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement