ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಚುನಾವಣಾ ಪ್ರಚಾರದಲ್ಲಿ ಮಕ್ಕಳ ಬಳಕೆ

Vishwanath S
Updated On : 1 May 2013, 12:11 pm

ಕನ್ನಡಪ್ರಭ ವಾರ್ತೆ, ಚಿಂಚೋಳಿ, ಏ.30
ಚುನಾವಣೆಯಲ್ಲಿ ಚಿಕ್ಕ ಮಕ್ಕಳನ್ನು ಪ್ರಚಾರಕ್ಕೆ ಬಳಸಿಕೊಳ್ಳದಂತೆ ರಾಜ್ಯ ಚುನಾವಣಾ ಆಯೋಗ ನಿಷೇಧಿಸಿದ್ದರು, ತಾಲೂಕಿನ ಅನೇಕ ಗ್ರಾಮಗಳಲ್ಲಿ ಮಕ್ಕಳನ್ನು ಚುನಾವಣೆಯಲ್ಲಿ ಬಳಸಿಕೊಳ್ಳುವುದು ಸಾಮಾನ್ಯವಾಗಿದೆ.
ಚಿಂಚೋಳಿ ಮೀಸಲು ವಿಧಾನಸಭಾ ಮತಕ್ಷೇತ್ರದಲ್ಲಿ ಕಾಂಗ್ರೆಸ್, ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳು ತಮ್ಮ ಚುನಾವಣಾ ಪ್ರಚಾರ ಸಂದರ್ಭದಲ್ಲಿ ಗ್ರಾಮಕ್ಕೆ ಭೇಟಿ ನೀಡಿದಾಗ ಚುನಾವಣಾ ಪ್ರಚಾರದ ಕರಪತ್ರ, ಬಾವುಟ ಮತ್ತು ಟೋಪಿ ಮತ್ತು ಕೊರಳಿನಲ್ಲಿ ಪಕ್ಷದ ಚಿಹ್ನೆವುಳ್ಳ ಶಾಲುಗಳನ್ನು ನೀಡಿ ಪ್ರಚಾರ ನಡೆಸುತ್ತಿದ್ದಾರೆ.
ತಾಲೂಕಿನಲ್ಲಿ ಚಿಕ್ಕ ಮಕ್ಕಳನ್ನು ಬಳಸಿಕೊಳ್ಳುತ್ತಿದ್ದರು ಸಹ ಅಧಿಕಾರಿಗಳು ಮಾತ್ರ ಕಣ್ಮುಚ್ಚಿ ಕುಳಿತಿದ್ದಾರೆ.
ತಾಲೂಕಿನ ಐನೋಳಿ ಮತ್ತು ಚಂದನಕೇರಾ ಗ್ರಾಮಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಅಭ್ಯರ್ಥಿಗಳು ತಮ್ಮ ಚುನಾವಣಾ ಪ್ರಚಾರ ಭಾಷಣ ಮಾಡಲು ಆಗಮಿಸಿದ ಸಂದರ್ಭದಲ್ಲಿ ಮಕ್ಕಳು ನೆರೆದ ಮತದಾರರಿಗೆ ಗಮನ ಸೆಳೆಯುತ್ತಿದ್ದರು. ಆದರೆ, ಮಕ್ಕಳಿಗೆ ಯಾವ ಪಕ್ಷಗಳ ಪರಿವೇ ಇಲ್ಲದಿದ್ದರು, ವಿವಿಧ ಪಕ್ಷಗಳ ಚಿಹ್ನೆವುಳ್ಳ ಟೋಪಿ ಮತ್ತು ಕರಪತ್ರ ಹಂಚಿ ಖುಷಿ ಪಡುತ್ತಿದ್ದಾರೆ. ಇದರ ಬಗ್ಗೆ ಚುನಾವಣಾಧಿಕಾರಿಗಳು ಗಮನಹರಿಸಬೇಕಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement