ರಾಜ್ಯ ಪ್ರಶಸ್ತಿಗೆ ಅರ್ಜಿ
ಗುಲ್ಬರ್ಗ: ಹಿರಿಯ ನಾಗರಿಕರು ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಸಂಸ್ಥೆಗಳಿಂದ 2013- 14ನೇ ಸಾಲಿನ ರಾಜ್ಯ ಪ್ರಶಸ್ತಿಗೆ ಗುಲ್ಬರ್ಗ ಮತ್ತು ಬೀದರ್ ಜಿಲ್ಲೆಗಳ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಿದೆ. ಅರ್ಹ ಸಂಸ್ಥೆಗಳು ತಮ್ಮ ಸ್ವವಿವರ ದಾಖಲೆಗಳೊಂದಿಗೆ ಆ.1ರೊಳಗಾಗಿ ಪ್ರಸ್ತಾವನೆಯನ್ನು ಗುಲ್ಬರ್ಗ ಮತ್ತು ಬೀದರ್ ಜಿಲ್ಲೆಗಳ ಜಿಲ್ಲಾ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಕಲ್ಯಾಣಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಕೋರಲಾಗಿದೆ.
ಟೆಸ್ಟ್ ವರದಿ ಸಲ್ಲಿಸಿ
ಗುಲ್ಬರ್ಗ: ಗುಲ್ಬರ್ಗ, ಯಾದಗಿರಿ ಹಾಗೂ ಬೀದರ್ ಜಿಲ್ಲೆಯಲ್ಲಿ ವಾಸಿಸುತ್ತಿರುವ 6- 14 ವಯಸ್ಸಿನ ಶ್ರವಣ ದೋಷವುಳ್ಳ ಮಕ್ಕಳ ಪಾಲಕರು ತಮ್ಮ ಮಕ್ಕಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಆಡಿಯೋ ಮೀಟರ್ ಟೆಸ್ಟ್ ರಿಪೋರ್ಟ್ ಪಡೆದು 2 ಪೋಟೋಗಳೊಂದಿಗೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ, ಗುಲ್ಬರ್ಗ, ಯಾದಗಿರಿ ಹಾಗೂ ಬೀದರ್ ಕಚೇರಿಗೆ ಸಲ್ಲಿಸುವಂತೆ ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ತಿಳಿಸಿದೆ.
ಅವಧಿ ವಿಸ್ತರಣೆ
ಗುಲ್ಬರ್ಗ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2013- 14ನೇ ಸಾಲಿಗೆ ಅನುಷ್ಠಾನಗೊಳಿಸುತ್ತಿರುವ ವಿವಿಧ ಯೋಜನೆಗಳ ಸೌಲಭ್ಯ ಪಡೆಯಲು ಅರ್ಜಿ ಆಹ್ವಾನಿಸಿ ಸಲ್ಲಿಸಲು ಜು. 31ಕೊನೆಯ ದಿನ ಎಂದು ಪ್ರಕಟಿಸಲಾಗಿತ್ತು. ಆದರೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕ ವಿಸ್ತರಿಸುವಂತೆ ಕೋರಲಾಗಿ ಅದನ್ನು ಜು.31ರಿಂದ ಆ.17ರವರೆಗೆ ವಿಸ್ತರಿಸಲಾಗಿದೆ. ಆದರೆ, ಅರ್ಜಿ ವಿತರಿಸುವ ದಿನಾಂಕವನ್ನು ವಿಸ್ತರಿಸಿರುವುದಿಲ್ಲ ಎಂದು ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಅರ್ಜಿ ಸಲ್ಲಿಕೆ ಮುಂದಕ್ಕೆ
ಗುಲ್ಬರ್ಗ: ಸಾರ್ವಜನಿಕ ಗ್ರಂಥಾಲಯ ಇಲಾಖೆಯಿಂದ ರಾಜ್ಯದ ನಾಲ್ಕು ಕಂದಾಯ ವಿಭಾಗದಲ್ಲಿ ತರಬೇತಿ ಶಾಲೆಯನ್ನು ನಡೆಸಲಾಗುತ್ತಿದೆ. ಗುಲ್ಬರ್ಗ ವಿಭಾಗದ ಗ್ರಂಥಾಲಯ ತರಬೇತಿ ಶಾಲೆಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಸುವ ದಿನಾಂಕವನ್ನು ಆಗಸ್ಟ್ 14ರವರೆಗೆ ವಿಸ್ತರಿಸಿದೆ ಎಂದು ನಗರ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಹಾಗೂ ಪ್ರಾಂಶುಪಾಲರು ತಿಳಿಸಿದ್ದಾರೆ.