ಸದಸ್ಯತ್ವ ಅಭಿಯಾನಕ್ಕೆ ಚಾಲನೆ
ಜೇವರ್ಗಿ: ರಾಷ್ಟ್ರೀಯ ಯುವ ನಾಯಕ ರಾಹುಲ್ ಗಾಂಧಿ ಅವರ ಆದೇಶದ ಮೇರೆಗೆ ಯುವ ಕಾಂಗ್ರೆಸ್ ಘಟಕದಿಂದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಲಾಗಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹ ಸದಸ್ಯತ್ವ ನೋಂದಣಿ ಮಾಡಿಕೊಳ್ಳುವಂತೆ ತಾಲೂಕು ಯುವ ಕಾಂಗ್ರೆಸ್ ಘಟಕದ ಉಪಾಧ್ಯಕ್ಷ ವಿಜಯಕುಮಾರ ಪಾಟೀಲ್ ಕಲ್ಲಹಂಗರಗಾ ಮನವಿ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ಜು.30ರಂದು ಪಕ್ಷದ ರಾಜ್ಯಾಧ್ಯಕ್ಷ ಡಾ. ಜಿ.ಪರಮೇಶ್ವರ ಅವರು ಈ ಕಾರ್ಯಕ್ರಮಕ್ಕೆ ರಾಜ್ಯದಲ್ಲಿ ಚಾಲನೆ ನೀಡಲಾಗಿದ್ದು, ಅದರಂತೆ ಜೇವರ್ಗಿ ತಾಲೂಕಿನಲ್ಲಿ ಸದಸ್ಯತ್ವ ಅಭಿಯಾನಕ್ಕೆ ಜು.30ರಂದೇ ಚಾಲನೆ ನೀಡಲಾಗಿದೆ ಎಂದರು. ಸದಸ್ಯತ್ವಕ್ಕಾಗಿ ಕೇಂದ್ರಸ್ಥಾನ ಜೇವರ್ಗಿ ಹಾಗೂ ಯಡ್ರಾಮಿ ಕಾಂಗ್ರೆಸ್ ಕಚೇರಿಯಲ್ಲಿ ಸದಸ್ಯತ್ವ ಅಭಿಯಾನ ನಡೆಯುತ್ತಿದ್ದು, ಈ ಅಭಿಯಾನ ಸೆ.5ರವರೆಗೆ ನಡೆಯಲಿದೆ. ರಾಷ್ಟ್ರದಲ್ಲಿ ಯುವ ಸಮೂಹಕ್ಕೆ ಸ್ಥಾನ ಮಾನ ಕಲ್ಪಿಸಿ ಸದೃಢ ರಾಷ್ಟ್ರ ನಿರ್ಮಾಣದ ಕನಸು ಹೊತ್ತು ಶ್ರಮಿಸುತ್ತಿರುವ ರಾಹುಲ್ ಗಾಂಧಿ ಅವರ ಕನಸು ನನಸು ಮಾಡಲು ಹೆಚ್ಚಿನ ಸಂಖ್ಯೆಯಲ್ಲಿ ಯುವ ಸಮೂಹ ಸದಸ್ಯತ್ವ ಪಡೆದುಕೊಳ್ಳಬೇಕೆಂದು ವಿಜಯಕುಮಾರ ಪಾಟೀಲ್ ಮನವಿ ಮಾಡಿದ್ದಾರೆ. ಕಾರ್ಯದರ್ಶಿ ಸೈಯದ್ ಫಯಾಜುದ್ದೀನ್ ಜಮಾದಾರ, ಮಲ್ಲಿಕಾರ್ಜುನ ಬಳ್ಳುಂಡಗಿ, ಶಿವುಕುಮಾರ್ ಗುಂಡಗುರ್ತಿ ಇದ್ದರು.