ಕ್ರೀಡಾಕೂಟ; ಸಾತನೂರು ಜಿಲ್ಲಾ ಮಟ್ಟಕ್ಕೆ
ಚಿತ್ತಾಪುರ: ತಾಲೂಕಿನ ದಂಡೋತಿಯಲ್ಲಿ ನಡೆದ ಪೈಕಾ ಗ್ರಾಮೀಣ ಕ್ರೀಡಾಕೂಟದಲ್ಲಿ ಸಾತನೂರು ಸರ್ಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಅಥ್ಲೆಟಿಕ್ ಸ್ಪರ್ಧೆಯಲ್ಲಿ ಮೇಲುಗೈ ಸಾಧಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ ಎಂದು ದೈಹಿಕ ಶಿಕ್ಷಕ ದೇವಿಂದ್ರರೆಡ್ಡಿ ದೂಗನೂರು ತಿಳಿಸಿದ್ದಾರೆ.
ಬಾಲಕಿಯರಿಗಾಗಿ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಶ್ರೀದೇವಿ ಶಂಕ್ರಪ್ಪ ಅವರು 1500 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗೂ 300 ಮೀಟರ್ ಓಟದಲ್ಲಿ ದ್ವಿತೀಯ ಹಾಗೂ ಚಕ್ರ ಎಸೆತದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
ಜ್ಯೋತಿ ತುಳೇಪ್ಪ ಉದ್ದ ಜಿಗಿತದಲ್ಲಿ ಪ್ರಥಮ ಸ್ಥಾನ, ಶಿಲ್ಪಾ 1500 ಮೀಟರ್ ಓಟದಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಬಾಲಕರಿಗಾಗಿ ಏರ್ಪಡಿಸಿದ್ದ ಸ್ಪರ್ಧೆಯಲ್ಲಿ ಕಾಶಿನಾಥ 1500 ಮೀಟರ್ ಓಟದಲ್ಲಿ ಪ್ರಥಮ, 800 ಮೀಟರ್ ಓಟದಲ್ಲಿ ದ್ವಿತೀಯ, ಕಾಶಪ್ಪ 300 ಮೀಟರ್ ಓಟದಲ್ಲಿ ದ್ವಿತೀಯ, ವೆಂಕಟೇಶ ಉದ್ದ ಜಿಗಿತದಲ್ಲಿ ಪ್ರಥಮ, ಶರಣು ಸಾತನೂರು ದ್ವಿತೀಯ ಸ್ಥಾನದಲ್ಲಿ ಜಯಗಳಿಸಿ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ ಎಂದು ವಿವರಿಸಿದ್ದಾರೆ.
ವಿದ್ಯಾರ್ಥಿಗಳ ಸಾಧನೆಗೆ ಮುಖ್ಯಗುರು ಹಾಗೂ ಸಿಬ್ಬಂದಿ ಹರ್ಷ ವ್ಯಕ್ತಪಡಿಸಿ ಅಭಿನಂದಿದ್ದಾರೆ.