ಹೆಚ್ಚುವರಿ ಶಿಕ್ಷಕರ ನೇಮಕಕ್ಕೆ ಮನವಿ
ಗುಲ್ಬರ್ಗ: ಸರ್ಕಾರಿ ಪ್ರೌಢಶಾಲೆಗಳಲ್ಲಿ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಿ ಸ್ಥಳಾಂತರಿಸುವ ಪ್ರಕ್ರಿಯೆ ಆರಂಭವಾಗಿದ್ದು, ಕೂಡಲೇ ವಿದ್ಯಾರ್ಥಿಗಳ ಮತ್ತು ಶಿಕ್ಷಕರ ನ್ಯೂನತೆಯನ್ನು ಸರಿಪಡಿಸಿ ಹೆಚ್ಚುವರಿ ಶಿಕ್ಷಕರನ್ನು ನೇಮಕ ಮಾಡಬೇಕೆಂದು ಕರ್ನಾಟಕ ಪ್ರೌಢಶಾಲಾ ಸಹ ಶಿಕ್ಷಕರ ಸಂಘ ಜಿಲ್ಲಾ ಶಾಖೆಯ ಮುಖಂಡರು ಗುಲ್ಬರ್ಗ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂಗೆ ಮನವಿ ಮಾಡಿದರು.
ಹೊಸ ಶಿಕ್ಷಣ ನೀತಿ ಜಾರಿಗೆ ಇರುವುದರಿಂದ (ಗೋವಿಂದ ವರದಿ) 6 ರಿಂದ 8ನೇ ತರಗತಿ ಹಾಗೂ 9ರಿಂದ 10ನೇ ತರಗತಿಯ ವಿದ್ಯಾರ್ಥಿಗಳಿಗೆ ಬೋಧಿಸಲು ಸಿಬ್ಬಂದಿ ಸ್ತರ ವಿನ್ಯಾಸವನ್ನು ತಳಿಸಿ ಹೆಚ್ಚುವರಿ ಮಾಡಬೇಕೆಂದು ಒತ್ತಾಯಿಸಿದರು.
ವಿದ್ಯಾರ್ಥಿಗಳ ಹಾಗೂ ಶಿಕ್ಷಕರ ಅನುಪಾತವನ್ನು ಪ್ರಾಥಮಿಕ ಶಾಲೆಯಲ್ಲಿ 301 ಇದ್ದು, ಇದೇ ಸರ್ಕಾರದಿಂದ ನಡೆಯುತ್ತಿರುವ ಪ್ರತಿಭಾವಂತ ಪ್ರೌಢಶಾಲೆಯಲ್ಲಿ 401 ಇರುವ ಶಾಲೆಗಳಾದ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಸ್ತೂರಬಾ ಶಾಲೆ, ಆದರ್ಶ ಇಂಗ್ಲೀಷ ಮಾಧ್ಯಮ, ನವೋದಯ ಶಾಲೆಗಳಲ್ಲಿ ಇವೆಲ್ಲಾ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ತೆಗೆದುಕೊಂಡು ಆಯ್ಕೆ ಮಾಡಿ ಬೋಧಿಸುತ್ತಾರೆ. ಆದರೆ, ಸಾಮಾನ್ಯ ಸರ್ಕಾರಿ ಪ್ರೌಢಶಾಲೆಗಳಲ್ಲಿ 701 ನಿಗದಿಪಡಿಸಿರುವುದು ಅವೈಜ್ಞಾನಿಕವಾಗಿದ್ದು, ಸಾಮಾನ್ಯ ಶಾಲೆಗಳಲ್ಲಿಯೂ 401ನ್ನು ನಿಗದಿಗೊಳಿಸಿ ಹೆಚ್ಚುವರಿ ಶಿಕ್ಷಕರನ್ನು ಗುರುತಿಸಬೇಕೆಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಶಶೀಲ್ ನಮೋಶಿ, ರಾಜ್ಯ ಉಪಾಧ್ಯಕ್ಷ ಸಿದ್ದಣ್ಣ ಪೂಜಾರಿ, ಜಿಲ್ಲಾಧ್ಯಕ್ಷ ವಿಶ್ವನಾಥ ಕಟ್ಟಿಮನಿ, ಎಸ್.ಎಸ್. ಪಾಟೀಲ್, ಬಾಬುರಾವ ಕುಲಕರ್ಣಿ, ಮೀರಾನ ಪಟೇಲ್ ಇತರರು ಇದ್ದರು.