39 ಮಕ್ಕಳು ಅಸ್ವಸ್ಥ
ಗುಲ್ಬರ್ಗ/ಜೇವರ್ಗಿ: ಜೇವರ್ಗಿಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ವಿಷಾಹಾರ ಸೇವಿಸಿ 39 ಮಕ್ಕಳು ಅಸ್ವಸ್ಥಗೊಂಡಿದ್ದು, ಏಳು ಮಕ್ಕಳ ಸ್ಥಿತಿ ಗಂಭೀರವಾಗಿದೆ. ಘಟನೆಗೆ ಸಂಬಂಧಿಸಿದಂತೆ ನಿಲಯದ ನಾಲ್ವರನ್ನು ಅಮಾನತುಗೊಳಿಸಲಾಗಿದೆ. ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಏಳು ಮಕ್ಕಳನ್ನು ಗುಲ್ಬರ್ಗ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.