ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ವಿಷಪೂರಿತ ಆಹಾರ ಸೇವನೆ: ತನಿಖೆಗೆ ಆಗ್ರಹಿಸಿ ಪ್ರತಿಭಟನೆ

Vishwanath S
Updated On : 15 Aug 2013, 11:43 am

ಕನ್ನಡಪ್ರಭ ವಾರ್ತೆ ,  ಗುಲ್ಬರ್ಗ ,  ಆ.14
ಜೇವರ್ಗಿಯ ಸರ್ಕಾರಿ ಮೆಟ್ರಿಕ್ ಪೂರ್ವ ವಸತಿ ನಿಲಯದ ವಿದ್ಯಾರ್ಥಿಗಳು ವಿಷಪೂರಿತ ಆಹಾರ ಸೇವನೆಯಿಂದ ಅಸ್ವಸ್ಥಗೊಂಡಿರುವ ಪ್ರಕರಣವನ್ನು ಕೂಡಲೇ ತನಿಖೆಗೆ ಒಪ್ಪಿಸಿ, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಎಐಡಿಎಸ್‌ಒ ನಗರದಲ್ಲಿ ಪ್ರತಿಭಟನೆ ನಡೆಸಿತು.
ಬಿಹಾರ ರಾಜ್ಯದಲ್ಲಿ ಕಳಪೆ ಮಟ್ಟದ ಆಹಾರ ವಿತರಣೆಯಿಂದ ವಿದ್ಯಾರ್ಥಿಗಳು ಸಾವನ್ನಪ್ಪಿದ ಹೃದಯವಿದ್ರಾವಕ ಘಟನೆ ಮನಸ್ಸಿನಿಂದ ಮಾಸುವ ಮುನ್ನವೇ ಜಿಲ್ಲೆಯಲ್ಲಿ ಇಂತಹ ಘಟನೆ ನಡೆದಿರುವುದು ವಿಷಾದನೀಯ ಎಂದು ಮುಖಂಡರು ಹೇಳಿದರು.
ಅಸ್ವಸ್ಥ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಬೇಕು. ಜಿಲ್ಲೆಯ ಎಲ್ಲ ವಸತಿ ನಿಲಯಗಳಲ್ಲಿ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಆಹಾರದ ಕುರಿತು ಎಚ್ಚರಿಕೆ ವಹಿಸಬೇಕು. ಇಂತಹ ಘಟನೆ ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಜಗನ್ನಾಥ ಎಸ್.ಎಚ್, ಜಿಲ್ಲಾ ಕಾರ್ಯದರ್ಶಿ ಎಸ್.ಎಂ. ಶರ್ಮಾ ಸೇರಿದಂತೆ ಸಂಘಟನೆ ಪದಾಧಿಕಾರಿಗಳು, ಹಲವಾರು ಯುವಕರು ಭಾಗವಹಿಸಿದ್ದರು.
ಎಐಎಸ್‌ಎಫ್ ಆರೋಪ: ಜೇವರ್ಗಿಯ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದಲ್ಲಿ ವಿಷಪೂರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಘಟನೆಗೆ ಅಲ್ಲಿನ ಅಧಿಕಾರಿಗಳೇ ಕಾರಣ ಎಂದು ಎಐಎಸ್‌ಎಫ್ ಜಿಲ್ಲಾ ಸಮಿತಿ ಆರೋಪಿಸಿದೆ.
ವಸತಿ ನಿಲಯದಲ್ಲಿ ನೀಡಲಾಗುತ್ತಿರುವ ಕಳಪೆ ಮಟ್ಟದ ಆಹಾರದಿಂದಾಗಿ ಮಕ್ಕಳು ವಾಂತಿ ಭೇದಿಯಿಂದ ಅಸ್ವಸ್ಥಗೊಳ್ಳಬೇಕಾಯಿತು. ವಿಷಪೂರಿತ ಆಹಾರ ಸೇವನೆಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಳ್ಳುತ್ತಿರುವ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದರು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ ಎಂದು ರಾಜ್ಯ ಸಂಚಾಲಕ ರಾಜೇಂದ್ರ ರಾಜವಾಳ, ಜೇವರ್ಗಿ ಸಂಚಾಲಕ ಲಕ್ಷ್ಮಣ, ಭೀಮಣ್ಣ, ಮೌನೇಶ ಆರೋಪಿಸಿದ್ದಾರೆ. ಮಕ್ಕಳ ಈ ದುಸ್ಥಿತಿಗೆ ಕಾರಣರಾದವರನ್ನು ಕೂಡಲೇ ಸೇವೆಯಿಂದ ಅಮಾನತುಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement