ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಎಂಜಿನಿಯರ್ಗಳ ಸೇವಾ ಭದ್ರತೆಗೆ ಸಂಘದ ಆಗ್ರಹ

Rashmi Kasaragodu
Updated On : 20 Aug 2013, 11:37 am

ಗುಲ್ಬರ್ಗ: ಲೋಕೋಪಯೋಗಿ ಇಲಾಖೆ, ಜಲ ಸಂಪನ್ಮೂಲ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಬ್ಯಾಕ್ಲಾಗ್ ಅಡಿಯಲ್ಲಿ ನೇಮಕಾತಿಯಾಗಿ ಕೆಲಸ ನಿರ್ವಹಿಸುತ್ತಿರುವ ಎಸ್ಸಿ, ಎಸ್ಟಿ ಎಂಜಿನಿಯರ್ಗಳಿಗೆ ಸೇವಾ ಭದ್ರತೆ ಕಲ್ಪಿಸುವಂತೆ ಕರ್ನಾಟಕ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಎಂಜಿನಿಯರ್ಗಳ(ಬ್ಯಾಕ್ಲಾಗ್) ಸಂಘ ಒತ್ತಾಯಿಸಿದೆ. ಈ ಅನ್ಯಾಯ ಕೂಡಲೇ ಸರಿಪಡಿಸಬೇಕು ಎಂದು ಒತ್ತಾಯಿಸಿ ಶೀಘ್ರದಲ್ಲಿ ಬೆಂಗಳೂರಿಗೆ ನಿಯೋಗ ತೆರಳಿ ಲೋಕೋಪಯೋಗಿ ಸಚಿವ ಎಚ್.ಸಿ. ಮಹಾದೇವಪ್ಪ ಅವರಿಗೆ ಭೇಟಿ ಮಾಡಲಾಗುವುದು ಎಂದು ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಮದಾನಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಗ್ರಾಪಂ ದಾಖಲೆ ನಾಶ: ಬಂಧನಕ್ಕೆ ಆಗ್ರಹ
ಗುಲ್ಬರ್ಗ:  ಆಳಂದ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಸುಂಟನೂರ ಗ್ರಾಮ ಪಂಚಾಯಿತಿಯಲ್ಲಿರುವ ಮಹತ್ವದ ದಾಖಲೆಗಳಿಗೆ ಬೆಂಕಿ ಹಚ್ಚಿ ಸುಟ್ಟು ನಾಶಪಡಿಸಿದ ಆರೋಪಿಗಳನ್ನು ಕೂಡಲೇ ಪತ್ತೆ ಹಚ್ಚಿ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಆ.22ರಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಗುವುದು ಎಂದು ಭಾರತೀಯ ದಲಿತ ಪ್ಯಾಂಥರ್ನ ತಾಲೂಕು ಅಧ್ಯಕ್ಷ ಕಾಶಿನಾಥ ದಿವಂಟಗಿ ಮತ್ತು ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ತೊಟ್ನಳ್ಳಿ ಎಚ್ಚರಿಸಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಪತ್ರ ಬರೆದಿರುವ ಅವರು, ಕಳೆದ 12ರಂದು ಮಧ್ಯಾಹ್ನ 3. 45ರ ಸುಮಾರಿಗೆ ಕೆಲವು ದುಷ್ಕರ್ಮಿಗಳು ದಿಢೀರನೆ ಗ್ರಾಪಂ ಕಚೇರಿಗೆ ನುಗ್ಗಿ ಮಹತ್ವದ ದಾಖಲೆಗಳಿಗೆ ಬೆಂಕಿ ಹಚ್ಚಿ ಸುಟ್ಟಿದ್ದಾರೆ ಎಂದು ತಿಳಿಸಿದ್ದಾರೆ.ಗ್ರಾಪಂ ಅಧ್ಯಕ್ಷರು ಮತ್ತು ಬಿಲ್ ಕಲೆಕ್ಟರ್ ಇಬ್ಬರು ನಿಂಬರ್ಗಾ ಪೊಲೀಸ್ ಠಾಣೆಗೆ ಹೋಗಿ ದೂರು ನೀಡಿದ್ದರು ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ದುಷ್ಕರ್ಮಿಗಳನ್ನು ಬಂಧಿಸಿ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.
ತಾಲೂಕು ಮಟ್ಟಕ್ಕೆ
ಗುಲ್ಬರ್ಗ: ಸಾರ್ವಜನಿಕ ಶಿಕ್ಷಣ ಇಲಾಖೆಯು ನಗರದ ನೂತನ ವಿದ್ಯಾಲಯ ಮೈದಾನದಲ್ಲಿ ಏರ್ಪಡಿಸಿದ್ದ ಹೋಬಳಿ ಮಟ್ಟದ ಕ್ರೀಡಾಕೂಟ ಮತ್ತು ಪಟ್ಟಣದ ಸರ್ಕಾರಿ ಪ್ರೌಢ ಶಾಲೆಯಲ್ಲಿ ಏರ್ಪಡಿಸಿದ್ದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ನಗರದ ನೂತನ ವಿದ್ಯಾಲಯ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಮತ್ತು ಪ್ರೌಢ ಶಾಲೆಯ ವಿದ್ಯಾರ್ಥಿಗಳು ಓಟದಲ್ಲಿ ಮತ್ತು ಎಸೆತ ಸ್ಪರ್ಧೆಯಲ್ಲಿ ಗೆಲವು ಸಾಧಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಭರ್ಚಿ ಎಸೆತ ಸ್ಪರ್ಧೆಯಲ್ಲಿ ರೋಹನ್, ರಶ್ಮಿ ಎಸ್.ಟಿ ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ. ಚಕ್ರ ಎಸೆತ ಸ್ಪರ್ಧೆಯಲ್ಲಿ ರೋಹನ್ ದ್ವಿತೀಯ ಬಹುಮಾನ, 200 ಮೀಟರ್ ಓಟದಲ್ಲಿ ಚೇತನ್ ಸಿ.ಎಸ್. ದ್ವಿತೀಯ ಬಹುಮಾನ ಮತ್ತು 600 ಮೀಟರ್ ಓಟದಲ್ಲಿ ದರ್ಶನ ವಿ. ಯು ದ್ವಿತೀಯ ಬಹುಮಾನ ಪಡೆದುಕೊಂಡಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement