ರಾಜೀವಗಾಂಧಿ ಅಕ್ಷಯ ಉರ್ಜಾ ದಿನಾಚರಣೆ
ಗುಲ್ಬರ್ಗ: ಗುಲ್ಬರ್ಗ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ನಗರದ ವಿವಿಧ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಆ.20 ರಂದು ಬೆಳಗ್ಗೆ 9 ಗಂಟೆಗೆ ನಗರದ ಅಶೋಕನಗರ ಬಡಾವಣೆಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ರಾಜೀವ ಗಾಂಧಿ ಅಕ್ಷಯ ಉರ್ಜಾ ದಿನಾಚರಣೆ ಅಂಗವಾಗಿ ಸಸಿ ನೆಡಸುವ ಕಾರ್ಯಕ್ರಮ ಆಯೋಜಿಸಲಾಗಿದೆ. ಪೌರಾಡಳಿತ ಸಾರ್ವಜನಿಕ ಉದ್ಯಮಗಳು, ಅಲ್ಪಸಂಖ್ಯಾತರ ಕಲ್ಯಾಣ, ವಕ್ಫ್, ಹಜ್ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಖಮರುಲ್ ಇಸ್ಲಾಂ ಕಾರ್ಯಕ್ರಮ ಉದ್ಘಾಟಿಸುವರು. ಕೇಂದ್ರ ರೇಲ್ವೆ ಸಚಿವ ಡಾ. ಮಲ್ಲಿಕಾರ್ಜುನ ಖರ್ಗೆ, ಬೀದರ ಲೋಕಸಭಾ ಸದಸ್ಯ ಎನ್.ಧರ್ಮಸಿಂಗ್, ವೈದ್ಯಕೀಯ ಶಿಕ್ಷಣ ರಾಜ್ಯ ಸಚಿವ ಡಾ.ಶರಣಪ್ರಕಾಶ ಪಾಟೀಲ್, ರಾಜ್ಯಸಭಾ ಸದಸ್ಯ ಬಸವರಾಜ ಪಾಟೀಲ್ ಸೇಡಂ ಮತ್ತು ಜಿಪಂ ಅಧ್ಯಕ್ಷ ಶರಣಪ್ಪ ಪೊಲೀಸ ಪಾಟೀಲ್ ತೇಲ್ಕೂರ್ ಆಗಮಿಸುವರು.