ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಲಾರಿ ಸಾರಿಗೆ ಮಹತ್ವದ್ದು: ಬ್ಯಾನರ್ಜಿ

Rashmi Kasaragodu
Updated On : 22 Aug 2013, 11:17 am

ಗುಲ್ಬರ್ಗ: ಭಾರತೀಯ ಅಟೋಮೊಬೈಲ್ ಕ್ಷೇತ್ರದಲ್ಲಿ ಲಾರಿ ಸಾರಿಗೆ ವ್ಯವಸ್ಥೆಯ ಪಾತ್ರ ಬಹಳ ಮುಖ್ಯವಾಗಿದ್ದು, ವಾರ್ಷಿಕ 38 ಸಾವಿರ ಕೋಟಿ ವಹಿವಾಟು ನಡೆಯುತ್ತಿದೆ. ಆದಾಗ್ಯೂ ಈ ಕ್ಷೇತ್ರದಲ್ಲಿ ದುಡಿಯುವವರು ಅಸಂಘಟಿತ ವಲಯಕ್ಕೆ ಸೇರಿರುವುದರಿಂದ ಇದು ನಿರ್ಲಕ್ಷ್ಯಕ್ಕೊಳಗಾಗಿದೆ ಎಂದು ಸಿಯೆಟ್ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕ ಅರ್ನಬ್ ಬ್ಯಾನರ್ಜಿ ಹೇಳಿದರು.
ಗುಲ್ಬಗಂ ನಗರದಲ್ಲಿ ನಡೆದ ಕಂಪನಿಯ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಅಟೋಮೊಬೈಲ್ ಕ್ಷೇತ್ರಗಳಲ್ಲಿ ನಡೆಯುತ್ತಿರುವ ಬೆಳವಣಿಗೆಗಳಿಂದು ಕ್ಷೇತ್ರದ ಪ್ರಗತಿಗೆ ಅಷ್ಟೊಂದು ಗಣನೀಯ ಪ್ರಮಾಣದಲ್ಲಿ ಕೊಡುಗೆ ನೀಡುತ್ತಿಲ್ಲ ಎಂದು ವಿಷಾದಿಸಿದರು.
ಸಿಯೆಟ್ ಕಂಪನಿಯು ಹೊಸ ಹೊಸ ಆವಿಷ್ಕಾರಗಳನ್ನು ಕೈಗೊಳ್ಳುತ್ತ ಉದ್ಯಮದ ಬೆಳವಣಿಗೆಗೆ ಸಹಾಯಕಾರಿಯಾಗಿ ಕೆಲಸ ಮಾಡುತ್ತಿದೆ. ಅಲ್ಲದೇ ಭಾರೀ ವಾಹನ ಸಾರಿಗೆ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಲಾರಿ ಉದ್ಯಮವನ್ನು ಗಮನದಲ್ಲಿಟ್ಟುಕೊಂಡು ಸಿಯೆಟ್ ಪ್ರೋ ಹೊಸ ಟೈರ್ಮೊಂದನ್ನು ಪರಿಚಯಿಸಲಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಟಾಟಾ ಮೋಟರ್ಸ್ನ ಹಣಕಾಸು ವಿಭಾಗದ ಮುಖ್ಯಸ್ಥ ಮೆಹಬೂಬ ಜಿಲಾಣಿ, ಟಾಟಾ ಮೋಟರ್ಸ್ನ ಸೇವೆಗಳ ವಿಭಾಗದ ಮುಖ್ಯಸ್ಥ ಪ್ರಮೋದ ವೈದ್ಯ ಹಾಗೂ ಭರತ ಟಂಡನ್, ನಿತ್ಯಾನಂದ ಕಾಂಚನ್ ಮೊದಲಾದವರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement