ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

26ರಿಂದ ಸಚಿವ ಚಿಂಚನಸೂರ ಪ್ರವಾಸ

Lingaraj Badiger
Updated On : 23 Aug 2013, 11:18 am

ಯಾದಗಿರಿ: ಜವಳಿ, ಬಂದರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಾಬುರಾವ ಚಿಂಚನಸೂರ ಅವರು ಆ.26ರಿಂದ 28ರವರೆಗೆ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ. ಆ.26ರಂದು ಮಧ್ಯಾಹ್ನ 1 ಗಂಟೆಗೆ ಯಲಸತ್ತಿ ಗ್ರಾಮದಲ್ಲಿ ಬ್ಯಾರೇಜ್ ಕಾಮಗಾರಿ ಉದ್ಘಾಟಿಸುವರು. ನಂತರ ಸಂಜೆ 4 ಗಂಟೆಗೆ ಗುಲ್ಬರ್ಗಕ್ಕೆ ಪ್ರಯಾಣ ಬೆಳೆಸುವರು. ಆ.27ರಂದು ಮಧ್ಯಾಹ್ನ 1 ಗಂಟೆಗೆ ಗುರುಮಠಕಲ್ ಸಮೀಪದ ಗುಂಜನೂರಿನಲ್ಲಿ ಆರ್ಸೇನಿಕ್ ಅಂಶ ಶುದ್ಧೀಕರಿಸುವ ನೀರು ಶುದ್ಧೀಕರಣ ಘಟಕ ಉದ್ಘಾಟಿಸಲಿದ್ದಾರೆ. ನಂತರ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಆ.28ರಂದು ಮಧ್ಯಾಹ್ನ 2 ಗಂಟೆಗೆ ಜಿಲ್ಲೆಯಲ್ಲಿ ನಡೆಯುತ್ತಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚೆ ಹಾಗೂ ಪರಿಶೀಲನೆ ನಡೆಸಲಿದ್ದಾರೆ.
ನಾಳೆ ಅತಿಥಿ ಉಪನ್ಯಾಸಕರ ಸಭೆ
ಯಾದಗಿರಿ: ಜಿಲ್ಲಾ ಅತಿಥಿ ಉಪನ್ಯಾಸಕರ ಸಭೆಯನ್ನು ಆ.24ರಂದು ಬೆಳಿಗ್ಗೆ 11ಕ್ಕೆ ನಗರದ ಸರ್ಕಾರಿ ಪದವಿ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಜಗದೀಶ ನೂಲಿನವರ ತಿಳಿಸಿದ್ದಾರೆ.
ಅತಿಥಿ ಉಪನ್ಯಾಸಕರ ಬೇಡಿಕೆಗಳ ಕುರಿತಾಗಿ ಚರ್ಚಿಸಲು ಸಭೆ ಕರೆಯಲಾಗಿದೆ. ಸಭೆಯ ನಂತರ ಬೇಡಿಕೆಗಳ ಈಡೇರಿಕೆಗಾಗಿ ಮನವಿಪತ್ರ ಸಲ್ಲಿಸಲು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ತೆರಳಲಿದ್ದು, ಸಂಘದ ಸದಸ್ಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಅವರು ಮನವಿ ಮಾಡಿದ್ದಾರೆ.
ಸಮ್ಮೇಳನ; ಒಒಡಿ ಸೌಲಭ್ಯ
ಗುರುಮಠಕಲ್: ಯಾದಗಿರಿ ನಗರದ ವಿದ್ಯಾಮಂಗಳ ಕಚೇರಿಯಲ್ಲಿ ಆ.24ರಂದು ನಡೆಯಲಿರುವ ಜಿಲ್ಲಾ ಪ್ರಥಮ ಚುಟುಕು ಸಾಹಿತ್ಯ ಸಮ್ಮೇಳನಕ್ಕೆ ಭಾಗವಹಿಸುವ ಶಿಕ್ಷಕರಿಗೆ ಒಒಡಿ ಸೌಲಭ್ಯದ ವ್ಯವಸ್ಥೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ ಮಾಡಲಾಗಿದೆ ಎಂದು ಚುಟುಕು ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಬಸವರಾಜ ಸಿನ್ನೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯಾಸಕ್ತರು ಸಮ್ಮೇಳನದಲ್ಲಿ ಭಾಗವಹಿಸಿ, ಕನ್ನಡ ತೇರು ಎಳೆಯೋಣ ಬನ್ನಿ. ಗಡಿ ನಾಡಿನಲ್ಲಿ ಕನ್ನಡದ ಕಹಳೆ ಮೊಳಗಲು ಕೈಜೋಡಿಸಿ ಎಂದು ಅವರು ವಿನಂತಿಸಿದ್ದಾರೆ.
ಡಿಕ್ಕಿ; ಬಾಲಕಿ ಸಾವು
ಶಹಾಪುರ: ಇಂಡಿಕಾ ಕಾರು ಡಿಕ್ಕಿ ಹೊಡೆದ ಪರಿಣಾಮ ರಸ್ತೆಯಲ್ಲಿ ಹೋಗುತ್ತಿದ್ದ ಬಾಲಕಿ ಮೃತಪಟ್ಟ ಘಟನೆ ತಾಲೂಕಿನ ಗೋಗಿ ಗ್ರಾಮದಲ್ಲಿ ಗುರುವಾರ ನಡೆದಿದೆ. ಯಲ್ಲಮ್ಮ(5) ಮೃತ ಬಾಲಕಿ. ಅಪಘಾತ ನಡೆಸಿದ ಕಾರಿನೊಂದಿಗೆ ಚಾಲಕ ಪರಾರಿಯಾಗಿದ್ದಾನೆ. ಗೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement