ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಯುವಕರೇ ದೇಶದ ರಾಷ್ಟ್ರಶಕ್ತಿ

Mainashree
Updated On : 28 Aug 2013, 11:01 am

ಭಾಲ್ಕಿ: ಜಗತ್ತಿನ ಎಲ್ಲಾ ರಾಷ್ಟ್ರಗಳಿಗಿಂತಲೂ ಹೆಚ್ಚಿನ ಯುವಕರು ಹೊಂದಿರುವ ರಾಷ್ಟ್ರ ಭಾರತವಾಗಿದೆ. ಇದು ರಾಷ್ಟ್ರಶಕ್ತಿಯಾಗಿದೆ ಎಂದು ಪತ್ರಕರ್ತ ಜಯರಾಜ ದಾಬಶೆಟ್ಟಿ ಅಭಿಪ್ರಾಯ ವ್ಯಕ್ತಪಡಿಸಿದರು.  ಪಟ್ಟಣದ ಖಡಕೇಶ್ವರ ವಿದ್ಯಾಮಂದಿರದಲ್ಲಿ ಎಬಿವಿಪಿ ವತಿಯಿಂದ ಆಯೋಜಿಸಲಾದ ಅಭ್ಯಾಸ ವರ್ಗ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ, ಚೀನಾ ಜಗತ್ತಿನಲ್ಲಿಯೇ ಹೆಚ್ಚು ಜನ ಸಂಖ್ಯೆ ಹೊಂದಿದ್ದು, ಅಲ್ಲಿ ಶೇ. 70 ಮುದುಕರಿದ್ದರೆ, ನಮ್ಮ ದೇಶದಲ್ಲಿ ಶೇ. 60 ಯುವಕರು ಇರುವುದು ಹೆಮ್ಮೆಯ ಸಂಗತಿ ಎಂದರು. ಶರಣ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಶಂಭುಲಂಗಾ ಕಾಮಣ್ಣಾ ಮಾತನಾಡಿ, ರಾಷ್ಟ್ರ ನಿರ್ಮಾಣ ಮಾಡುವಲ್ಲಿ ಯುವಶಕ್ತಿಯ ಪಾತ್ರ ಬಹಳ ಮಹತ್ವದ್ದಾಗಿದೆ. ಆದ್ದರಿಂದ ಯುವಕರು ಯಾವುದೇ ದುರ್ವ್ಯಸನಕ್ಕೆ ದಾಸರಾಗದೇ, ಸಚ್ಚರಿತ್ರೆ ಬೆಳೆಸಿಕೊಳ್ಳಬೇಕೆಂದು ಸಲಹೆ ನೀಡಿದರು. ಎಬಿವಿಪಿ ತಾಲೂಕು ಅಧ್ಯಕ್ಷ ಶಿವಕುಮಾರ ಕಾಂಜೊಳಗೆ ಮಾತನಾಡಿ, ವಿದ್ಯಾರ್ಥಿಗಳು ಆದರ್ಶ ವ್ಯಕ್ತಿತ್ವ ಬೆಳೆಸಿಕೊಳ್ಳಬೇಕು ಎಂದರು. ವಿಶ್ವ ಹಿಂದೂ ಪರಿಷತ್ ಜಿಲ್ಲಾ ಪ್ರಮುಖ ಸುಧಾಕರ ಇದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement