ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ಗುಲ್ಬರ್ಗಾ

ಗೋಹತ್ಯೆ ನಿಷೇಧ ಕಾಯ್ದೆ ಹಿಂದಕ್ಕೆ; ಪ್ರತಿಭಟನೆ

Lingaraj Badiger
Updated On : 29 Aug 2013, 11:56 am

ಗುಲ್ಬರ್ಗ: ಕಾಂಗ್ರೆಸ್ ಸರ್ಕಾರ ಹಿಂದಿನ ಬಿಜೆಪಿ ಸರ್ಕಾರ ಜಾರಿಗೊಳಿಸಲು ಸಿದ್ಧಪಡಿಸಿದ್ದ ಗೋಹತ್ಯೆ ನಿಷೇಧ ಕಾಯ್ದೆ ತಿದ್ದುಪಡಿಯನ್ನು ಹಿಂಪಡೆದಿರುವ ಕ್ರಮವನ್ನು ಖಂಡಿಸಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ಗೋಹತ್ಯೆ ನಿಷೇಧ ಕಾಯ್ದೆಯನ್ನು ಈ ಹಿಂದೆ ಉಭಯ ಸದನಗಳಲ್ಲಿ ಅನುಮೋದಿಸಿ ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಲಾಗಿತ್ತು. ದುರ್ದೈವವಶಾತ್ ರಾಜ್ಯಪಾಲರು ಕಳೆದ ಅನೇಕ ತಿಂಗಳಿಂದ ಒಪ್ಪಿಗೆ ನೀಡಿದೆ ತಡೆಹಿಡಿದ್ದರು, ಹೊಸ ಕಾಂಗ್ರೆಸ್ ಸರ್ಕಾರವು ಗೋ, ಭೂ ಮತ್ತು ಪ್ರಕೃತಿ ಪ್ರೇಮಿಗಳ ಭಾವನೆಗಳಿಗೆ ಕವಡೆ ಕಿಮ್ಮತ್ತು ನೀಡದೇ ಕೇವಲ ತಮ್ಮ ಮತಬ್ಯಾಂಕ್ ರಾಜಕಾರಣವನ್ನು ಘೋಷಿಸುವ ಹುನ್ನಾರದಲ್ಲಿ ಈ ಮಸೂದೆಯನ್ನು ತಿರಸ್ಕರಿಸಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಜಿಲ್ಲಾಧ್ಯಕ್ಷ ರಾಜಕುಮಾರ್ ಪಾಟೀಲ್ ತೇಲ್ಕೂರ್, ನಗರಾಧ್ಯಕ್ಷ ವಿದ್ಯಾಸಾಗರ ಶಾಬಾದಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶರಣಪ್ಪ ತಳವಾರ, ಮಾಜಿ ಶಾಸಕಿ ಅರುಣಾ ಪಾಟೀಲ್ ರೇವೂರ, ಬಿಜೆಪಿ ಮುಖಂಡರಾದ ರಾಜಗೋಪಾಲರೆಡ್ಡಿ, ಎಚ್.ಎ. ರೆಡ್ಡಿ ಸೇರಿದಂತೆ ನೂರಾರು ಕಾರ್ಯಕರ್ತರು ನಗರದ ಪಕ್ಷದ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ರ್ಯಾಲಿ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement